ನವದೆಹಲಿ (ಡಿ. 25): ಲೋಕಸಭೆ ಚುನಾವಣೆಗೆ ಪೂರ್ವ ಭಾವಿಯಾಗಿ ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳಲ್ಲಿ ರಥಯಾತ್ರೆಗೆ ಪಡೆಯಲಾಗಿದ್ದ ಅವಕಾಶ ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಆದೇಶದ ವಿರುದ್ಧದ ಅರ್ಜಿಯನ್ನು ಶೀಘ್ರ ವಿಚಾರಣೆ ನಡೆಸಬೇಕು ಎಂಬ ಬಿಜೆಪಿ ಕೋರಿಕೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಈ ಕುರಿತು ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ಸಾಮಾನ್ಯ ಅರ್ಜಿ ಎಂದು ಪರಿಗಣಿಸಿದ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲು ನಿರ್ಧರಿಸಿದೆ. ಹೀಗಾಗಿ, ಪಶ್ಚಿಮ ಬಂಗಾಳದ 42 ಕ್ಷೇತ್ರಗಳಲ್ಲಿ ‘ಪ್ರಜಾಪ್ರಭುತ್ವ ಉಳಿಸಿ ಯಾತ್ರೆ’ ಕೈಗೊಳ್ಳಲು
ಮುಂದಾಗಿದ್ದ ಬಿಜೆಪಿಗೆ ಹಿನ್ನಡೆಯಾಗಿದೆ.