ನವದೆಹಲಿ[ನ.01]  ಅಯೋಧ್ಯೆ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯ ವಿಚಾರಣೆಯನ್ನು 2019ರ ಜನವರಿ ತಿಂಗಳಿಗೆ ಮುಂದೂಡಿದೆ. ಇದೇ ವಿಚಾರವನ್ನು ಇಟ್ಟುಕೊಂಡು ರಾಷ್ಟರೀಯ ಸ್ವಯಂ ಸೇವಕ  ವಾಗ್ದಾಳಿ ಮಾಡಿದೆ.

ಸುಪ್ರೀಂ ಕೋರ್ಟ್ ಬಹುಸಂಖ್ಯಾತ ಹಿಂದುಗಳ ಭಾವನೆಯನ್ನು ಪರಿಗಣನೆಗೆ ತೆಗೆದುಕೊಂಡಿದಲ್ಲ ಎಂದು ಆರ್ ಎಸ್ ಎಸ್ ಆರೋಪಿಸಿದೆ. ಥಾಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ಭಯ್ಯಾಜಿ ಜೋಷಿ, ಸುಪ್ರೀಂ ಹಿಂದುಗಳ ಭಾವನೆಗೆ ಧಕ್ಕೆ ಮಾಡಿದೆ ಎಂದಿದ್ದಾರೆ.

ಅಕ್ಟೋಬರ್ 29ಕ್ಕೆ ಇದ್ದ ವಿಚಾರಣೆಯನ್ನು ದೀರ್ಘಕಾಲ ಮುಂದೂಡಿದೆ. ಯಾವ ಆಧಾರದಲ್ಲಿ ಹೀಗೆ ಮಾಡಿದೆ ಎನ್ನುವುದು ಗೊತ್ತಾಗುತ್ತಿಲ್ಲ. ಕೇಂದ್ರ ಸರಕಾರ ಈ ವಿಚಾರವನ್ನು ಮತ್ತೆ ಗಣನೆಗೆ ತೆಗೆದುಕೊಂಡು ಪರ್ಯಾಯ ಮಾರ್ಗಗಳ ಬಗ್ಗೆ ಆಲೋಚಿಸಬೇಕು ಎಂಬ ಸಲಹೆಯನ್ನು ನೀಡಿದ್ದಾರೆ.