ನವದೆಹಲಿ :  ಹಾಪುರ್ ಲಿಂಚಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಸೋಮವಾರ ಮೀರತ್ ಐಜಿಪಿಗೆ ನಿರ್ದೇಶನ ನೀಡಿದ್ದು, ಸರ್ಕಾರಕ್ಕೂ ನೋಟಿಸ್ ನೀಡಿದೆ.

ಗೋ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ನಿಟ್ಟಿನಲ್ಲಿ ಓರ್ವ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಹತ್ಯೆ ನಡೆಸಲಾಗಿತ್ತು.  ಈ ಘಟನೆಯಲ್ಲಿ ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದರು. 

ಈ ಸಂಬಂಧ  ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಸೈಮುದ್ದಿನ್ ಎನ್ನುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಇದೀಗ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 

ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಸೂಕ್ತ ರೀತಿಯ ಕ್ರಮ ಕೈಗೊಳ್ಳಬೇಕು. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ನಿರ್ದೇಶನ ನೀಡಲಾಗಿದೆ. 

ಅಲ್ಲದೇ ಸಂತ್ರಸ್ತರಿಗೆ ಸೂಕ್ತ ರೀತಿಯ ರಕ್ಷಣೆ ನೀಡುವಂತೆಯೂ ಕೂಡ ನ್ಯಾಯಪೀಠ ಹಾಪೂರ್ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದೆ.