ಸಿನೆಮಾ ಹಾಲ್‌ಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿದ ಆದೇಶವನ್ನು ತಡೆ ಹಿಡಿಯುವಂತೆ ಕೇಂದ್ರ ಸರ್ಕಾರ ಮಾಡಿದ ಮನವಿಗೆ ಸುಪ್ರೀಂ ಕೋರ್ಟ್ ಸ್ಪಂದಿಸಿದ್ದು, ಈ ಆದೇಶವನ್ನು ರದ್ದುಗೊಳಿಸಿದೆ.
ಹೊಸದಿಲ್ಲಿ: ಸಿನೆಮಾ ಹಾಲ್ಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿದ ಆದೇಶವನ್ನು ತಡೆ ಹಿಡಿಯುವಂತೆ ಕೇಂದ್ರ ಸರ್ಕಾರ ಮಾಡಿದ ಮನವಿಗೆ ಸುಪ್ರೀಂ ಕೋರ್ಟ್ ಸ್ಪಂದಿಸಿದ್ದು, ಈ ಆದೇಶವನ್ನು ರದ್ದುಗೊಳಿಸಿದೆ.
ಚಿತ್ರ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡುವುದು ಕಡ್ಡಾಯವಲ್ಲ, ಚಿತ್ರ ಮಂದಿರಗಳ ವಿವೇಚನೆಗೆ ಈ ನಿರ್ಧಾರ ಬಿಟ್ಟಿದ್ದು, ಎಂದು ಕೋರ್ಟ್ ಹೇಳಿದೆ.
ಆದೇಶ ಜಾರಿಗೊಂಡ ಒಂದು ವರ್ಷದ ಬಳಿಕ, ಗೃಹ ಸಚಿವಾಲಯದ ಅಧೀನ ಕಾರ್ಯದರ್ಶಿ ದೀಪಕ್ ಕುಮಾರ್ ಸರ್ಕಾರದ ಪರವಾಗಿ ಅಫಿಡವಿಟ್ ಸಲ್ಲಿಸಿದ್ದರು.
ರಾಷ್ಟ್ರಗೀತೆ ನುಡಿಸುವುದಕ್ಕೆ ಹೊಸ ಮಾರ್ಗಸೂಚಿಗಳನ್ನು ರಚಿಸಲು ಅಂತರ್ ಸಚಿವಾಲಯ ಸಮಿತಿ ರಚಿಸಿದೆ. ಅದರ ವರದಿ ಅಂತಿಮಗೊಳ್ಳಲು ಆರು ತಿಂಗಳು ಬೇಕಾಗುತ್ತದೆ.
