ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಇಂದು ಆದೇಶಿಸಿದೆ. ಗಣಪತಿ ಆತ್ಮಹತ್ಯೆ ಪ್ರಕರಣದ ಸಿಐಡಿ ತನಿಖೆ ನಡೆಯುತ್ತಿರುವಾಗಲೇ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಗಣಪತಿ ಕುಟುಂಬದವರು ಕೋರಿದ್ದರು. ಇದಕ್ಕೆ ಸರ್ಕಾರ ನಿರಾಕರಿಸಿದಾಗ ಗಣಪತಿ ತಂದೆ ಕುಶಾಲಪ್ಪ ಮತ್ತು ತಾಯಿ ಪೂವಮ್ಮ ಅವರು ಹೈಕೋರ್ಟ್ ಏಕ ಸದಸ್ಯ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್’ನಲ್ಲಿ  ಅರ್ಜಿ ವಜಾಗೊಂಡಿತ್ತು.

ನವದೆಹಲಿ: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಇಂದು ಆದೇಶಿಸಿದೆ.

ಗಣಪತಿ ಆತ್ಮಹತ್ಯೆ ಪ್ರಕರಣದ ಸಿಐಡಿ ತನಿಖೆ ನಡೆಯುತ್ತಿರುವಾಗಲೇ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಗಣಪತಿ ಕುಟುಂಬದವರು ಕೋರಿದ್ದರು. ಇದಕ್ಕೆ ಸರ್ಕಾರ ನಿರಾಕರಿಸಿದಾಗ ಗಣಪತಿ ತಂದೆ ಕುಶಾಲಪ್ಪ ಮತ್ತು ತಾಯಿ ಪೂವಮ್ಮ ಅವರು ಹೈಕೋರ್ಟ್ ಏಕ ಸದಸ್ಯ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್’ನಲ್ಲಿ ಅರ್ಜಿ ವಜಾಗೊಂಡಿತ್ತು.

ನಂತರ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದ ಗಣಪತಿ ಕುಟುಂಬ, ಅಲ್ಲೂ ಅರ್ಜಿ ವಜಾಗೊಂಡಿತ್ತು.

ನಂತರ ಗಣಪತಿ ಪೋಷಕರು ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿಯನ್ನು ಸಲ್ಲಿಸಿದ್ದರು.