ನವದೆಹಲಿ: ಕಾವೇರಿ ನೀರು ಬಿಡುಗಡೆ ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಅನ್ಯಾಯವಾಗಿದೆ. ತಮಿಳುನಾಡಿಗೆ ಪ್ರತಿದಿನ 15 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಮುಂದಿನ 10 ದಿನಗಳ ಕಾಲ ನೀರು ಬಿಡುವಂತೆ ಸೂಚನೆ ನೀಡಿದೆ. ಸುಪ್ರೀಂ ಆದೇಶದಿಂದ ಕರ್ನಾಟಕ ಸರ್ಕಾರಕ್ಕೆ ಮತ್ತೆ ಹಿನ್ನೆಡೆಯಾಗಿದೆ. 10 ದಿನದಲ್ಲಿ 13.7 ಟಿಎಂಸಿ ನೀರು ತಮಿಳುನಾಡಿಗೆ ಹರಿಯಲಿದೆ. ಸದ್ಯ ಕೆಆರ್'ಎಸ್'ನಲ್ಲಿ ಇರುವುದು 17 ಟಿಎಂಸಿ ನೀರು ಮಾತ್ರ. 17 ಟಿಎಂಸಿಯಲ್ಲಿ ಬಳಕೆಗೆ ಸಿಗುವುದು ಕೇವಲ 8 ಟಿಎಂಸಿ ನೀರು ಮಾತ್ರ.ತಮಿಳು ನಾಡು 50 ಟಿಎಂಸಿ ನೀರು ಬಿಡುಗಡೆಗೆ ಮನವಿ ಮಾಡಿತ್ತು.
ರಾಜ್ಯದ ಪರ ವಕೀಲ ಪಾಲಿ ನಾರಿಮನ್ ಸುಪ್ರೀಂ ಕೋರ್ಟ್‍ಗೆ ರಾಜ್ಯದ ಪರ ಮಾಹಿತಿ ಒದಗಿಸಿದ್ದರು. ಸುಪ್ರೀ೦ ಕೋರ್ಟ್'ನ ನ್ಯಾಯಾಧೀಶರಾದ ದೀಪಕ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ ತಮಿಳು ನಾಡು ಪರ ತೀರ್ಪು ನೀಡಿದೆ. ರಾಜ್ಯ ಸರ್ಕಾರ ತನ್ನ ಪರಿಸ್ಥಿತಿಯನ್ನು ಸುಪ್ರೀಂ ಮುಂದೆ ಮಂಡಿಸಲು ವಿಫಲವಾಗಿದೆ.
