ತಮಿಳುನಾಡು ಜಯಲಲಿತಾ ಅನುಮಾನಸ್ಪದ ಸಾವು ಪ್ರಕರಣ| ರಾಜ್ಯ ಸರ್ಕಾರ ರಚಿಸಿದ್ದ ತನಿಖಾ ಆಯೋಗಕ್ಕೆ ತನಿಖೆ ನಡೆಸದಂತೆ ಸೂಚನೆ| ಅಪೋಲೋ ಆಸ್ಪತ್ರೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್| ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್ಮುಗಸ್ವಾಮಿ ನೇತೃತ್ವದ ಆಯೋಗಕ್ಕೆ ತನಿಖೆ ನಡೆಸದಂತೆ ಸೂಚನೆ| ಮದ್ರಾಸ್ ಹೈಕೋರ್ಟ್ ಆದೇಶ ತಳ್ಳಿ ಹಾಕಿದ ಸುಪ್ರೀಂ ಕೋರ್ಟ್|
ನವದೆಹಲಿ(ಏ.26): ಜಯಲಲಿತಾ ಸಾವಿನ ತನಿಖೆ ನಡೆಸಲು ತಮಿಳುನಾಡು ಸರ್ಕಾರ ರಚಿಸಿರುವ ತನಿಖಾ ಆಯೋಗಕ್ಕೆ, ಪ್ರಕರಣದ ವಿಚಾರಣೆ ನಡೆಸದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್ಮುಗಸ್ವಾಮಿ ನೇತೃತ್ವದ ತನಿಖಾ ಆಯೋಗದ ವಿಚಾರಣೆಗೆ ತಡೆ ನೀಡಬೇಕು ಎಂದು ಚೆನ್ನೈನ ಅಪೋಲೋ ಆಸ್ಪತ್ರೆ ಸಲ್ಲಿಸಿತ್ತು.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ, ತನಿಖೆಗೆ ತಡೆ ನೀಡಿ ಆದೇಶ ಹೊರಡಿಸಿದೆ.
ತನಿಖೆಗೆ ತಡೆ ಕೋರಿ ಅಪೋಲೋ ಆಸ್ಪತ್ರೆ ಮದ್ರಾಸ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಆದರೆ ತನಿಖೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಅಪೋಲೋ ಆಸ್ಪತ್ರೆಗೆ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.
2016ರ ಸೆ.22ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಅಪೊಲೋ ಆಸ್ಪತ್ರೆ ಸೇರಿದ್ದ ಜಯಲಲಿತಾ, 2016ರ ಡಿ.5ರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದರು.
ಆದರೆ ಜಯಾ ಸಾವಿನ ಕುರಿತು ಅನುಮಾನ ವ್ಯಕ್ತವಾಗಿದ್ದ ಕಾರಣ, ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಆರ್ಮುಗಸ್ವಾಮಿ ನೇತೃತ್ವದಲ್ಲಿ ತನಿಖಾ ಆಯೋಗ ರಚನೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
