ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ನ.13ಕ್ಕೆ ಸುಪ್ರೀಂಕೋರ್ಟ್ ವಿಚಾರಣೆ ಮುಂದೂಡಿದೆ. ಮುಂದಿನ ವಿಚಾರಣೆಗೆ ಹಾಜರಿರಲು ಅಟಾರ್ನಿ ಜನರಲ್ಗೆ ಕೋರ್ಟ್ ಸೂಚನೆ ನೀಡಿದೆ.
ನವದೆಹಲಿ (ನ.06): ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ನ.13ಕ್ಕೆ ಸುಪ್ರೀಂಕೋರ್ಟ್ ವಿಚಾರಣೆ ಮುಂದೂಡಿದೆ. ಮುಂದಿನ ವಿಚಾರಣೆಗೆ ಹಾಜರಿರಲು ಅಟಾರ್ನಿ ಜನರಲ್ಗೆ ಕೋರ್ಟ್ ಸೂಚನೆ ನೀಡಿದೆ.
ಕಂಬಳಕ್ಕೆ ತಡೆ ನೀಡಬೇಕೆಂದು ಕೋರಿ ಪೇಟಾ ಸುಪ್ರೀಂಕೋರ್ಟ್'ಗೆ ಅರ್ಜಿ ಸಲ್ಲಿಸಿತ್ತು. ಆದರೆ ಕಂಬಳಕ್ಕೆ ತಡೆ ನೀಡಲು ಕೋರ್ಟ್ ನಿರಾಕರಿಸಿದೆ.
