3 ತಿಂಗಳು ಜನಾರ್ದನ ರೆಡ್ಡಿ ಬಳ್ಳಾರಿಗೆ ಹೋಗುವಂತಿಲ್ಲ

First Published 23, Jan 2018, 10:48 AM IST
Supreme Court Reject Reddy Plea
Highlights

ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಳ್ಳಾರಿ ರಾಜಕೀಯದಲ್ಲಿ ಮತ್ತೆ ಸಕ್ರಿಯರಾಗುವ ನಿರೀಕ್ಷೆ ಇಟ್ಟುಕೊಂಡಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಭಾರೀ ಹಿನ್ನಡೆಯಾಗಿದೆ. ಬಳ್ಳಾರಿ, ಆಂಧ್ರದ ಅನಂತಪುರಕ್ಕೆ ತೆರಳಲು ಅವಕಾಶ ಮಾಡಿಕೊಡುವಂತೆ ಕೋರಿ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

ನವದೆಹಲಿ: ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಳ್ಳಾರಿ ರಾಜಕೀಯದಲ್ಲಿ ಮತ್ತೆ ಸಕ್ರಿಯರಾಗುವ ನಿರೀಕ್ಷೆ ಇಟ್ಟುಕೊಂಡಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಭಾರೀ ಹಿನ್ನಡೆಯಾಗಿದೆ. ಬಳ್ಳಾರಿ, ಆಂಧ್ರದ ಅನಂತಪುರಕ್ಕೆ ತೆರಳಲು ಅವಕಾಶ ಮಾಡಿಕೊಡುವಂತೆ ಕೋರಿ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅವರಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಜಾಮೀನು ನೀಡುವ ಸಂದರ್ಭದಲ್ಲಿ ಬಳ್ಳಾರಿ ಹಾಗೂ ಆಂಧ್ರದ ಅನಂತಪುರ ಮತ್ತು ಕಡಪ ಜಿಲ್ಲೆಗಳಿಗೆ ಹೋಗದಂತೆ ನಿರ್ಬಂಧ ವಿಧಿಸಿತ್ತು.

ಈಗ ರೆಡ್ಡಿ ಅವರು ಜಾಮೀನು ಷರತ್ತುಗಳನ್ನು ಸಡಿಲ ಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾ. ಎ.ಕೆ. ಸಿಕ್ರಿ ಮತ್ತು ನ್ಯಾ.ಅಶೋಕ್ ಭೂಷಣ್ ಜಾಮೀನು ಷರತ್ತುಗಳನ್ನು ಸಡಿಲಿಸಲು ನಿರಾಕರಿಸಿತು. ಜತೆಗೆ ಮೂರು ತಿಂಗಳವರೆಗೆ ಈ ರೀತಿ ಅರ್ಜಿ ಸಲ್ಲಿಸದಂತೆ ಹೇಳಿತು.

loader