ಐಎನ್ಎಕ್ಸ್ ಮೀಡಿಯಾ ಹಗರಣ| ಪಿ ಚಿದಂಬರಂಗೆ ನಿರೀಕ್ಷಣಾ ಜಾಮೀನಿಗೆ ನಕಾರ| ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್| ಇದು ನಿರೀಕ್ಷಣಾ ಜಾಮೀನು ನೀಡುವ ಪ್ರಕರಣವಲ್ಲ ಎಂದ ಸುಪ್ರೀಂಕೋರ್ಟ್| ‘ಆರ್ಥಿಕ ಅಪರಾಧಗಳಲ್ಲಿ ಜಾಮೀನು ನೀಡುವುದರಿಂದ ತನಿಖೆಯ ಮೇಲೆ ಪರಿಣಾಮ’|

ನವದೆಹಲಿ(ಸೆ.05):ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿಂದತೆ, ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. 

Scroll to load tweet…

ಇ.ಡಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಈ ಹಿಂದೆ ಚಿದಂಬರಂ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇದು ನಿರೀಕ್ಷಣಾ ಜಾಮೀನು ನೀಡುವ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿದೆ.

Scroll to load tweet…

ಆರ್ಥಿಕ ಅಪರಾಧ ಪ್ರಕರಣಗಳು ವಿವಿಧ ಆಯಾಮಗಳನ್ನು ಹೊಂದಿದ್ದು, ಹಣಕಾಸು ಅವ್ಯವಹಾರಗಳ ವಿಚಾರದಲ್ಲಿ ನಿರೀಕ್ಷಣಾ ಜಾಮೀನು ನೀಡುವುದರಿಂದ ತನಿಖೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ನ್ಯಾಯ ಪೀಠ ಅಭಿಪ್ರಾಯಪಟ್ಟಿದೆ.

Scroll to load tweet…

ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರು ವಿಚಾರಣಾ ನ್ಯಾಯಾಲಯದಲ್ಲಿ ರೆಗ್ಯುಲರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.