ನವದೆಹಲಿ[ಡಿ.08]: ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ)ನ ಬಂಡವಾಳ ಸಂಗ್ರಹವನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. ಅಲ್ಲದೆ ಅರ್ಜಿದಾರನಿಗೆ 50 ಸಾವಿರ ರು. ದಂಡ ವಿಧಿಸಿದೆ.

ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌)ಯನ್ನು ವಿಚಾರಣೆಗೆ ಅಂಗೀಕರಿಸಲು ಯಾವುದೇ ಕಾರಣಗಳು ಸಿಗುತ್ತಿಲ್ಲ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ದ್ವಿಸದಸ್ಯ ಪೀಠ, ಅರ್ಜಿದಾರ ಎಂ.ಎಲ್‌. ಶರ್ಮಾಗೆ 50 ಸಾವಿರ ರು. ದಂಡ ವಿಧಿಸಿತು. ದಂಡ ಕಟ್ಟುವವರೆಗೂ ಯಾವುದೇ ಪಿಐಎಲ್‌ ಸಲ್ಲಿಸಲು ಅವಕಾಶ ನೀಡದಂತೆ ರಿಜಿಸ್ಟ್ರಿಗೆ ಸೂಚಿಸಿತು.

ಅರ್ಜಿಯನ್ನು ವಜಾಗೊಳಿಸಿದ ನಂತರವೂ ಶರ್ಮಾ ವಾದ ಮಂಡಿಸಿದ ಹಿನ್ನೆಲೆಯಲ್ಲಿ ಈ ದಂಡ ವಿಧಿಸಲಾಯಿತು.