Asianet Suvarna News Asianet Suvarna News

ಅತೃಪ್ತ ಶಾಸಕರ ರಾಜೀನಾಮೆ, ಇಂದೇ ನಿರ್ಧರಿಸಲು ಸ್ಪೀಕರ್‌ಗೆ ಸುಪ್ರೀಂ ಸೂಚನೆ!

ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂ ಮಹತ್ವದ ತೀರ್ಪು| ಅರ್ಜಿ ಸಲ್ಲಿಸಿದ 10 ಅತೃಪ್ತ ಶಾಸಕರ ರಾಜೀನಾಮೆಯನ್ನು ಇಂದು ಸಂಜೆ 06 ಗಂಟೆಯೊಳಗೆ ನಿರ್ಧರಿಸಿ| ಇಂದೇ ನಿರ್ಧಾರವಾಗಲಿದೆ ದೋಸ್ತಿ ಸರ್ಕಾರದ ಭವಿಷ್ಯ

Supreme Court says Karnataka Speaker has to take a decision in remaining part the day
Author
Bangalore, First Published Jul 11, 2019, 11:32 AM IST

ಬೆಂಗಳೂರು[ಜು.11]: ರಾಜೀನಾಮೆ ಅಂಗೀಕಾರ ವಿಚಾರವಾಗಿ ಕಾಂಗ್ರೆಸ್‌-ಜೆಡಿಎಸ್‌ನ ಅತೃಪ್ತ ಶಾಸಕರು ಮತ್ತು ಸ್ಪೀಕರ್‌ ರಮೇಶ್‌ ಕುಮಾರ್‌ ನಡುವಿನ ತಿಕ್ಕಾಟ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆರುವ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ತ್ರಿಸದಸ್ಯ ಪೀಠ ಅತೃಪ್ತರ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಇಂದೇ ನಿರ್ಧಾರ ಪ್ರಕಟಿಸಬೇಕು ಎಂದಿದೆ.

"

ಸ್ಪೀಕರ್ ವಾದಕ್ಕೆ ಹಿನ್ನಡೆಯಾಗಿದ್ದು, ದೋಸ್ತಿ ಸರ್ಕಾರಕ್ಕೆ ಇಂದೇ ಅಗ್ನಿ ಪರೀಕ್ಷೆ ಎದುರಾಗಲಿದೆ. ಅರ್ಜಿ ಸಲ್ಲಿಸಿದ 10 ಅತೃಪ್ತ ಶಾಸಕರಿಗೆ ಸ್ಪೀಕರ್ ಎದುರು ಸಂಜೆ 6 ಗಂಟೆಯೊಳಗೆ ಹಾಜರಾಗಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಇತ್ತ ರಾಜೀನಾಮೆ ವಿಚಾರವಾಗಿ ಇಂದೇ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಹಾಗೂ ನಡೆದ ಬೆಳವಣಿಗೆಗಳ ಬಗ್ಗೆ ನಾಳೆ ಮಾಹಿತಿ ನೀಡಿ ಎಂದ ಸುಪ್ರೀಂ ಕೋರ್ಟ್ ಸ್ಪೀಕರ್ ರಮೇಶ್‌ ಕುಮಾರ್‌ಗೆ ಸೂಚಿಸಿದೆ.  ಇದೇ ಸಂದರ್ಭದಲ್ಲಿ ಈ ಶಾಸಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಕರ್ನಾಟಕ ಡಿಸಿಪಿಗೆ ಸುಪ್ರೀಂ ನಿರ್ದೇಶಿಸಿದೆ. ಈ ಆದೇಶದ ಬೆನ್ನಲ್ಲೇ ಅತೃಪ್ತ ಶಾಸಕರು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಹೊರಟಿದ್ದಾರೆನ್ನಲಾಗಿದೆ.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅತೃಪ್ತರ ದೂರಿನಲ್ಲಿ ಏನಿತ್ತು?:

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ಅಡಳಿತ ಸಂಪೂರ್ಣ ಕುಸಿದಿದೆ. ದುರಾಡಳಿತವೇ ಹೆಚ್ಚಾಗಿದ್ದು, ಐಎಂಎ ವಂಚನೆ, ಜೆಎಸ್‌ಡಬ್ಲ್ಯು ಭೂ ಹಗರಣದಂಥ ಹಲವು ಅಕ್ರಮಗಳು ಈ ಸರ್ಕಾರಾವಧಿಯಲ್ಲಿ ನಡೆದಿವೆ. ನಿರಂತರ ಆಂತರಿಕ ಸಂಘರ್ಷದಿಂದ ಸರ್ಕಾರ ಅಸ್ಥಿರವಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಿದರೂ ಹೀನಾಯವಾಗಿ ಸೋಲಾಗಿದೆ.

ಈ ಎಲ್ಲ ಕಾರಣಗಳಿಂದ ಬೇಸತ್ತು ನಾವೆಲ್ಲ ಜು.6ರಂದು ರಾಜೀನಾಮೆ ನೀಡಲು ಹೋಗುತ್ತಿರುವುದು ಗೊತ್ತಾಗುತ್ತಿದ್ದಂತೆ ಸ್ಪೀಕರ್‌ ಖಾಸಗಿ ಕಾರಿನಲ್ಲಿ ಕಚೇರಿಯಿಂದ ಹೊರ ಹೋಗಿದ್ದು ನಂತರ ಸಿಗಲೇ ಇಲ್ಲ. ಹೀಗಾಗಿ ವಿಧಾನಸಭೆ ಕಾರ್ಯದರ್ಶಿಗಳಿಗೆ ಮತ್ತು ರಾಜ್ಯಪಾಲರಿಗೆ ನಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದೇವೆ. ಬಳಿಕ ರಾಜ್ಯಪಾಲರು ಸ್ಪೀಕರ್‌ ಅವರಿಗೆ ನಮ್ಮ ರಾಜೀನಾಮೆ ಪತ್ರಗಳನ್ನು ರವಾನಿಸಿದ್ದಾರೆ. ಇದೇ ವೇಳೆ ಇನ್ನಿಬ್ಬರು ಶಾಸಕರು ಮಂತ್ರಿ ಪದವಿಗೆ ತಮ್ಮ ರಾಜೀನಾಮೆ ಪತ್ರ ಹಾಗೂ ಬಿಜೆಪಿಗೆ ತಮ್ಮ ಬೆಂಬಲ ಪತ್ರವನ್ನು ರಾಜ್ಯಪಾಲರಿಗೆ ನೀಡಿದ್ದಾರೆ. ನಾವು ಸ್ವ ಇಚ್ಛೆಯಿಂದ ಯಾವುದೇ ಭಯಕ್ಕೆ ಒಳಗಾಗದೇ ಸಂವಿಧಾನಬದ್ಧವಾಗಿ ರಾಜೀನಾಮೆ ನೀಡಿದ್ದೇವೆ.

ಜು.9ಕ್ಕೆ ಕಚೇರಿಗೆ ಆಗಮಿಸಿದ ಸ್ಪೀಕರ್‌ ಅವರು ಮಾಧ್ಯಮಗಳ ಮುಂದೆ ಬಂದು, ರಾಜೀನಾಮೆ ಸಲ್ಲಿಸಿದವರಲ್ಲಿ ಎಂಟು ಮಂದಿ ಶಾಸಕರ ರಾಜೀನಾಮೆ ಕ್ರಮಬದ್ಧವಾಗಿಲ್ಲ ಎಂದು ಹೇಳಿ 12ರಂದು ತಮ್ಮ ಮುಂದೆ ಖುದ್ದಾಗಿ ಹಾಜರಾಗುವಂತೆ 5 ಶಾಸಕರಿಗೆ ತಿಳಿಸಿದ್ದಾರೆ. ಇದು ದೂರುದಾರರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವ ಸ್ಪೀಕರ್‌ ಅವರ ಇಂಗಿತವನ್ನು ತೋರಿಸುತ್ತದೆ. ಈ ಮೂಲಕ ಅಲ್ಪಮತಕ್ಕೆ ಕುಸಿದಿರುವ ಸರ್ಕಾರವನ್ನು ಕಾಪಾಡುವ ಉದ್ದೇಶವಿದ್ದಂತಿತ್ತು.

ನಮ್ಮ ರಾಜೀನಾಮೆ ಪತ್ರ ನಿಗದಿತ ನಮೂನೆಯಲ್ಲಿಲ್ಲವೆಂಬ ಸ್ಪೀಕರ್‌ ಹೇಳಿಕೆ ಕರ್ನಾಟಕ ವಿಧಾನಸಭೆಯ ನಿಯಮಾವಳಿಗಳಿಗೆ ವಿರುದ್ಧವಾಗಿದೆ. ನಮ್ಮ ರಾಜೀನಾಮೆ ಸಂವಿಧಾನದ ನಿಯಮಗಳಿಗೆ ಬದ್ಧವಾಗಿದೆ. ಸ್ಪೀಕರ್‌ ಆ ರೀತಿ ಹೇಳಿರುವುದು ರಾಜೀನಾಮೆ ಪ್ರಕ್ರಿಯೆ ವಿಳಂಬಗೊಳಿಸಿ, ಈಗಾಗಲೇ ರಾಜೀನಾಮೆ ನೀಡಿರುವ ಶಾಸಕರ ಮೇಲೆ ಒತ್ತಡ ಹೇರಲು ಅನುಕೂಲ ಮಾಡಿಕೊಡುವಂತಿದೆ. ನಮ್ಮ ರಾಜೀನಾಮೆಯನ್ನು ಸ್ವೀಕರಿಸದ ಸ್ಪೀಕರ್‌ ನಡೆ ಅತಾರ್ಕಿಕ, ಅಸಹಜ ಮತ್ತು ಸಂವಿಧಾನ ವಿರೋಧಿ. ಮುಖ್ಯಮಂತ್ರಿಗಳು ರಾಜೀನಾಮೆ ನೀಡಬಹುದೆಂಬ ಆತಂಕದಿಂದ ಸ್ಪೀಕರ್‌ ಸರ್ಕಾರದ ಬೆಂಬಲಕ್ಕೆ ನಿಂತಿದ್ದಾರೆ ಎಂದು ಹೇಳಲಾಗಿತ್ತು.

ಸ್ಪೀಕರ್ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಅತೃಪ್ತ ಶಾಸಕರ ಪಟ್ಟಿ

ಪ್ರತಾಪ್‌ಗೌಡ ಪಾಟೀಲ್, ರಮೇಶ್‌ ಜಾರಕಿಹೊಳಿ, ಬೈರತಿ ಬಸವರಾಜು, ಬಿ.ಸಿ.ಪಾಟೀಲ್, ಶಿವಾನಂದ ಹೆಬ್ಬಾರ್‌, ಎಸ್‌.ಟಿ.ಸೋಮಶೇಖರ್‌, ಎಚ್‌.ವಿಶ್ವನಾಥ್‌, ಮಹೇಶ್‌ ಕುಮಟಳ್ಳಿ, ಕೆ.ಗೋಪಾಲಯ್ಯ, ನಾರಾಯಣ ಗೌಡ

ಸುಪ್ರೀಂ ನಿರ್ದೇಶನದ ಬಗ್ಗೆ ವಿಶ್ವನಾಥ್ ಪ್ರತಿಕ್ರಿಯೆ:

"

 

 

Follow Us:
Download App:
  • android
  • ios