ನವದೆಹಲಿ : ರಾಜ್ಯ ಸಭಾ ಚುನಾವಣೆಯಲ್ಲಿ ನೋಟಾ ಮತದಾನಕ್ಕೆ ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ  ಹೇಳಿದೆ. 

ಈ ಬಗ್ಗೆ ವಿಚಾರಣೆ ನಡೆಸಿದ  ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ  ಹಾಗೂ ನ್ಯಾಯಮೂರ್ತಿ ಎ.ಎಂ. ಖನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ನ್ಯಾಯಪೀಠವು ಚುನಾವಣಾ ಆಯೋಗಕ್ಕೆ ಈ ಬಗ್ಗೆ ತಿಳಿಸಿದೆ. 

ಗುಜರಾತ್ ಕಾಂಗ್ರೆಸ್ ಮುಖಂಡರಾದ ಮನುಭಾಯಿ ಪರ್ಮಾರ್ ಎನ್ನುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್  ಈ ವಿಚಾರ ತಿಳಿಸಿದೆ. 

ರಾಜ್ಯ ಸಭಾ ಚುನಾವಣೆಯಲ್ಲಿ ನೋಟಾಗೆ ಅವಕಾಶ ನೀಡುವುದು ಕುದುರೆ ವ್ಯಾಪಾರಕ್ಕೆ ಮತ್ತು ಭ್ರಷ್ಟಾಚಾರಕ್ಕೆ ಅವಕಾಶ ನೀಡಿದಂತೆ ಎಂದು ಕಾಂಗ್ರೆಸ್ ಮುಖಂಡರು ಆರೋಪ ಮಾಡಿದ್ದರು.