ಹತ್ತು ವರ್ಷಗಳಿಂದ ಸೇವೆಯಲ್ಲಿರುವ 393 ಅಧಿಕಾರಿಗಳು ಹೈಕೋರ್ಟ್‌  ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಟಿ.ಎಸ್‌.ಠಾಕೂರ್‌ ಮತ್ತು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರ ನ್ಯಾಯಪೀಠ ವಿಚಾರಣೆಗೆ ಪರಿಗಣಿಸಿತು.

ನವದೆಹಲಿ (ಡಿ.15): ಲೋಕಸೇವಾ ಆಯೋಗವು 2006ರಲ್ಲಿ ಸಿದ್ಧಪಡಿಸಿದ್ದ 1998,1999 ಮತ್ತು 2004ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ಆಯ್ಕೆಪಟ್ಟಿಯನ್ನು ಪರಿಷ್ಕರಿಸುವಂತೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ.

ಹತ್ತು ವರ್ಷಗಳಿಂದ ಸೇವೆಯಲ್ಲಿರುವ 393 ಅಧಿಕಾರಿಗಳು ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಟಿ.ಎಸ್‌.ಠಾಕೂರ್‌ ಮತ್ತು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರ ನ್ಯಾಯಪೀಠ ವಿಚಾರಣೆಗೆ ಪರಿಗಣಿಸಿತು.

ಜೂನ್‌ 21ರಂದು ಹೈಕೋರ್ಟ್‌ ನೀಡಿದ್ದ ತೀರ್ಪಿಗೆ ತಡೆಯಾಜ್ಞೆ ನೀಡುವುದರ ಜತೆಗೆ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರ ಮತ್ತು ಕೆಪಿಎಸ್‌ಸಿಗೆ ನಿರ್ದೇಶಿಸಿತು. ಅರ್ಜಿಯ ಮುಂದಿನ ವಿಚಾರಣೆಯನ್ನು ಮಾರ್ಚ್‌ ತಿಂಗಳಿಗೆ ಮುಂದೂಡಲಾಗಿದೆ.