ಬಾಬ್ರಿ ಮಸೀದಿ- ಅಯೋಧ್ಯೆ ರಾಮ ಮಂದಿರ ವಿವಾದ ಧಾರ್ಮಿಕ ಭಾವನೆಗಳಿಗೆ ಸಂಬಂಧಿಸಿದ ಅತ್ಯಂತ ಸೂಕ್ಷ್ಮ ವಿಚಾರ. ಮೊದಲಿಗೆ ಎರಡು ಸಮುದಾಯಗಳು ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥಕ್ಕೆ ಯತ್ನಿಸಬೇಕು ಎಂದು ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಸೂಚಿಸಿದ್ದಾರೆ.

ನವದೆಹಲಿ (ಮಾ.21): ಅಯೋಧ್ಯೆ ಬಾಬ್ರಿ ಮಸೀದಿ- ರಾಮ ಜನ್ಮಭೂಮಿ ವಿವಾದ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಸಲಹೆ ನೀಡಿದೆ.

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ವಿವಾದವನ್ನು ಕೋರ್ಟ್‌’ನ ಹೊರಗಡೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಸರ್ವೋಚ್ಛ ನ್ಯಾಯಾಲಯ ಸಲಹೆ ನೀಡಿದೆ.

ಎರಡು ಕಡೆಯವರು ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಳ್ಳಲು ಸಾಧ್ಯವಾಗದಿದ್ದರೆ ಮಾತ್ರ ಮಧ್ಯೆ ಪ್ರವೇಶಿಸುವುದಾಗಿ ಸುಪ್ರೀಂ ಕೋರ್ಟ್​ ತಿಳಿಸಿದೆ.

ರಾಮಮಂದಿರ ವಿವಾದ ಕಳೆದ ಆರು ವರ್ಷಗಳಿಂದ ಬಾಕಿವುಳಿದಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್​ ಈ ಮಹತ್ವದ ಸಲಹೆ ನೀಡಿದೆ.

ಬಾಬ್ರಿ ಮಸೀದಿ- ಅಯೋಧ್ಯೆ ರಾಮ ಮಂದಿರ ವಿವಾದ ಧಾರ್ಮಿಕ ಭಾವನೆಗಳಿಗೆ ಸಂಬಂಧಿಸಿದ ಅತ್ಯಂತ ಸೂಕ್ಷ್ಮ ವಿಚಾರ. ಮೊದಲಿಗೆ ಎರಡು ಸಮುದಾಯಗಳು ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥಕ್ಕೆ ಯತ್ನಿಸಬೇಕು ಎಂದು ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಸೂಚಿಸಿದ್ದಾರೆ.

ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯ ಈ ಸಲಹೆ ನೀಡಿದೆ.

ಆದರೆ ಎರಡು ಸಮುದಾಯಗಳು ಕುಳಿತು ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥ ಕಷ್ಟ ಸಾಧ್ಯ. ಆದ್ದರಿಂದ ನ್ಯಾಯಾಂಗದ ಮೂಲಕ ಕೇಸ್ ಇತ್ಯರ್ಥವಾಗಬೇಕು ಎಂದು ಸ್ವಾಮಿ ಕೋರ್ಟ್‌ಗೆ ತಿಳಿಸಿದ್ದಾರೆ. ಹೀಗಾಗಿ ಸುಪ್ರೀಂ ಕೋರ್ಟ್ ಪ್ರಕರಣವನ್ನು ಮಾ.31ಕ್ಕೆ ಮುಂದೂಡಿದೆ.