ಬಾಬ್ರಿ ಮಸೀದಿ-ರಾಮ ಜನ್ಮಭೂಮಿ ವಿವಾದದ ಕೇಂದ್ರ ಬಿಂದುವಾಗಿರುವ ಅಯೋಧ್ಯೆಯ 2.73 ಎಕರೆ ಭೂಮಿಯ ಒಡೆತನಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಡಿ.5 ರಿಂದ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಇಂದು ಹೇಳಿದೆ. ರಾಮ ಲಲ್ಲಾ ವಕೀಲ ಸಿ.ಎಸ್. ವೈದ್ಯನಾಥನ್ ಅವರು ಮೊದಲು ತಮ್ಮ ವಾದವನ್ನು ಆರಂಭಿಸಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ಈ ಸಂದರ್ಭದಲ್ಲಿ ಹೇಳಿದೆ.
ನವದೆಹಲಿ: ಬಾಬ್ರಿ ಮಸೀದಿ-ರಾಮ ಜನ್ಮಭೂಮಿ ವಿವಾದದ ಕೇಂದ್ರ ಬಿಂದುವಾಗಿರುವ ಅಯೋಧ್ಯೆಯ 2.73 ಎಕರೆ ಭೂಮಿಯ ಒಡೆತನಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಡಿ.5 ರಿಂದ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಇಂದು ಹೇಳಿದೆ.
ರಾಮ ಲಲ್ಲಾ ವಕೀಲ ಸಿ.ಎಸ್. ವೈದ್ಯನಾಥನ್ ಅವರು ಮೊದಲು ತಮ್ಮ ವಾದವನ್ನು ಆರಂಭಿಸಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ಈ ಸಂದರ್ಭದಲ್ಲಿ ಹೇಳಿದೆ.
ವಿವಾದಿತ ಸ್ಥಳದ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ 13 ಅರ್ಜಿಗಳು ಬಂದಿದ್ದು ಸುಪ್ರೀಂ’ನ ತ್ರಿಸದಸ್ಯ ಪೀಠವು ವಿಚಾರಣೆ ನಡೆಸಲಿದೆ.
ಕಳೆದ ಜು.21ರಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ದಶಕಗಳಷ್ಟು ಹಳೆಯದದ ಪ್ರಕರಣವನ್ನು ಆದಷ್ಟು ಬೇಗ ತ್ಯಗರ್ಥಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದ್ದರು.
