ಗೋವುಗಳ ಮಾರಾಟ ಮತ್ತು ಖರೀದಿ ಮೇಲೆ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ ಹೈದರಾಬಾದ್ ಮೂಲದ ಸಂಘಟನೆಯೊಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು  ಜೂ.15 ರಂದು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದೆ.

ನವದೆಹಲಿ (ಜೂ.07): ಗೋವುಗಳ ಮಾರಾಟ ಮತ್ತು ಖರೀದಿ ಮೇಲೆ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ ಹೈದರಾಬಾದ್ ಮೂಲದ ಸಂಘಟನೆಯೊಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜೂ.15 ರಂದು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದೆ.

ಗೋಹತ್ಯೆ ನಿಷೇಧ ವಿಚಾರವನ್ನು ಪ್ರಶ್ನಿಸಿ ಕೆಲವು ಸಂಘಟನೆಗಳು ಸಲ್ಲಿಸಿರುವ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಪರಿಶೀಲನೆ ನಡೆಸಲಿದೆ. ಇದನ್ನೊಂದು ಪ್ರತಿಷ್ಠೆ ವಿಚಾರವಾಗಿ ಸರ್ಕಾರ ಪರಿಗಣಿಸುವುದಿಲ್ಲ ಎಂದು ಪರಿಸರ ಸಚಿವ ಹರ್ಷ ವರ್ಧನ್ ಹೇಳಿದ್ದಾರೆ.

ಗೋಹತ್ಯೆ ನಿಷೇಧದ ಬಗ್ಗೆ ಈಗಾಗಲೇ ಮದ್ರಾಸ್ ಹೈಕೋರ್ಟ್ 4 ವಾರಗಳ ತಡೆಯಾಜ್ಞೆ ನೀಡಿದೆ. ಈ ವಿಚಾರವಾಗಿ ಕೇರಳ, ತಮಿಳುನಾಡು ಹಾಗೂ ಪಂಜಾಬ್’ಗಳಲ್ಲಿ ಪ್ರತಿಭಟನೆಗಳಾಗಿವೆ. ಕೆಲವೆಡೆ ಬೀಫ್ ಫೆಸ್ಟ್ ಗಳು ಕೂಡಾ ನಡೆದಿವೆ.

ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ನಿಷೇಧವನ್ನು ಹಿಂತೆಗೆದುಕೊಳ್ಳಲು ಆಗ್ರಹಿಸಿದ್ದಾರೆ. ಇತರೆ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಮಮತಾ ಬ್ಯಾನರ್ಜಿ ಕೂಡಾ ಇವರಿಗೆ ದನಿಗೂಡಿಸಿದ್ದಾರೆ.