ನವದೆಹಲಿ: ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಗೆ ಸಂಬಂಧಿಸಿದ ತೀರ್ಪು ಮರು ಪರಿಶೀಲಿಸಬೇಕೆಂಬ ಕೇಂದ್ರದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮೇ.3ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಎಸ್‌ಸಿ/ಎಸ್ಟಿಕಾಯ್ದೆಯ ಅನ್ವಯ ಯಾವುದೇ ದೂರು ದಾಖಲಾದ ಕ್ಷಣ ಆರೋಪಿಗಳನ್ನು ಬಂಧಿಸಕೂಡದು.
ಸರ್ಕಾರಿ ಅಧಿಕಾರಿಗಳ ಮೇಲೆ ಇಂಥ ದೂರು ದಾಖಲಾಗಿದ್ದರೆ, ಮೊದಲು ಇಲಾಖಾ ವಿಚಾರಣೆ ನಡೆಯಬೇಕು ಎಂದು ಇತ್ತೀಚೆಗೆ ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಿತ್ತು.