ಬೆಂಗಳೂರು (ಸೆ.20): ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವುದು ಅಘಾತಕಾರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು ಎಂದು ಹೇಳಿರುವುದು ಅಘಾತಕಾರಿ , ನಾನು ಇದನ್ನು ವಿರೋಧಿಸುತ್ತೇನೆ ಎಂದು ಹೇಳಿದ್ರು. ನಾವು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ಕೊಟ್ಟಿದ್ವಿ. ಆದ್ರೆ 10 ಸಾವಿರ ಕ್ಯೂಸೆಕ್ ನೀರು ಬಿಡುತ್ತೇವೆ ಅಂತಾ ಅಫಿಡವಿಟ್ ಸಲ್ಲಿಸಿದ್ದೇ ತಪ್ಪಾಯ್ತು ಅಂತಾ ಆರೋಪಿಸಿದ್ರು. ಕೂಡಲೇ ಸಿಎಂ ವಿಧಾನಸಭೆ ಅಧಿವೇಶನ ಕರೆಯಲಿ ಅಂತಾ ಒತ್ತಾಯಿಸಿದರು.