ಹಿಂದೂಗಳು ಅಲ್ಪಸಂಖ್ಯಾತರಾಗಿರುವ 8 ರಾಜ್ಯಗಳಲ್ಲಿ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕು ಎಂಬ ಮನವಿಯನ್ನು ವಿಚಾರಣೆಗೆ ಅಂಗೀಕರಿಸಲು ನಿರಾಕರಿಸಿದ ಸುಪ್ರೀಂಕೋರ್ಟ್, ಈ ಕುರಿತು ರಾಷ್ಟ್ರೀಯ ಅಲ್ಪ ಸಂಖ್ಯಾತ ಆಯೋಗಕ್ಕೆ ಮನವಿ ಸಲ್ಲಿಸಲು ಸೂಚಿಸಿದೆ.

ನವದೆಹಲಿ: ಹಿಂದೂಗಳು ಅಲ್ಪಸಂಖ್ಯಾತರಾಗಿರುವ 8 ರಾಜ್ಯಗಳಲ್ಲಿ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕು ಎಂಬ ಮನವಿಯನ್ನು ವಿಚಾರಣೆಗೆ ಅಂಗೀಕರಿಸಲು ನಿರಾಕರಿಸಿದ ಸುಪ್ರೀಂಕೋರ್ಟ್, ಈ ಕುರಿತು ರಾಷ್ಟ್ರೀಯ ಅಲ್ಪ ಸಂಖ್ಯಾತ ಆಯೋಗಕ್ಕೆ ಮನವಿ ಸಲ್ಲಿಸಲು ಸೂಚಿಸಿದೆ.

ಹೀಗಾಗಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನದ ವಿಷಯ ಇದೀಗ ಅಲ್ಪಸಂಖ್ಯಾತ ಆಯೋಗದ ಹೆಗಲಿಗೆ ವರ್ಗವಾಗಿದೆ.

ಬಿಜೆಪಿ ಮುಖಂಡ ಅಶ್ವನಿ ಕುಮಾರ್ ಉಪಾಧ್ಯಾಯ ಎಂಬುವವರು ಸುಪ್ರೀಂ ಕೋರ್ಟ್‌ಗೆ ಈ ಮನವಿ ಸಲ್ಲಿಸಿದ್ದರು.

ಹಿಂದುಗಳು ಈ ರಾಜ್ಯದಲ್ಲಿ ಕಡಿಮೆ ಸಂಖ್ಯೆಯಲ್ಲಿದ್ದರೂ ಅವರಿಗೆ ದೊರಕಬೇಕಾದ ಅಲ್ಪಸಂಖ್ಯಾತ ಸ್ಥಾನಮಾನದ ಪ್ರಯೋಜನಗಳು ದೊರಕುತ್ತಿಲ್ಲ. ಅಲ್ಪಸಂಖ್ಯಾತ ಸ್ಥಾನಮಾನ ಹೊಂದಿರುವ ಬಹುಸಂಖ್ಯಾತರೇ ಎಲ್ಲ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಅರ್ಜಿದಾರರು ದೂರಿದ್ದರು.

(ಸಾಂದರ್ಭಿಕ ಚಿತ್ರ)