ಬಿಜೆಪಿ ಸಂಸದಗೆ ಲೋಕಸಭಾ ಟಿಕೆಟ್ ಕೈ ತಪ್ಪುವ ಭೀತಿ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 23, Jul 2018, 11:25 AM IST
Suresh Angadi Likely Miss Lok Sabha Ticket
Highlights

ಬಿಜೆಪಿ ಸಂಸದಗೆ ಇದೀಗ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪುವ ಭೀತಿ ಎದುರಾಗಿದೆ. ಆದ್ದರಿಂದ ಹೈ ಕಮಾಂಡ್ ಟಿಕೆಟ್ ನೀಡಿದವರ ಪರವಾಗಿ ಕೆಲಸ ಮಾಡುವುದಾಗಿ ಅವರು ಹೇಳಿದ್ದಾರೆ.

ಬೆಳಗಾವಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಲು ನಿರ್ಧಸುತ್ತೋ ಅವರ ಪರವಾಗಿ  ಪ್ರಾಮಾಣಿಕವಾಗಿ ಕೆಲಸ ಮಾಡುವೆ ಎಂದು ಬಿಜೆಪಿ ಸಂಸದ ಸುರೇಶ ಅಂಗಡಿ ತಿಳಿಸಿದ್ದಾರೆ. ಈ ಮೂಲಕ ಟಿಕೆಟ್ ಕೈತಪ್ಪುವ ಭೀತಿ ವ್ಯಕ್ತಪಡಿಸಿದ್ದಾರೆ. 

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಆಡಳಿತ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಇನ್ನೂ ಹಲವು ಕಾರ್ಯಗಳು ಆಗಬೇಕಿದೆ. ಆದರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಮುಖಂಡರು ನನಗೆ ಟಿಕೆಟ್ ನೀಡಿದರೂ ಸರಿ, ಇಲ್ಲವೇ ಬೇರೆಯವರಿಗೆ ಚುನಾವಣೆಗೆ ಸ್ಪರ್ಧಿಸುವಂತೆ ತಿಳಿಸಿದರೆ ಯಾವುದೇ ಬೇಸರ ಇಲ್ಲ.

ನಾನು ಪಕ್ಷದ ಕಾರ್ಯಕರ್ತನಾಗಿ ಪ್ರಮಾಣಿಕವಾಗಿ ಅವರಿಗೆ ಬೆಂಬಲಿಸುವೆ ಎಂದು ಸ್ಪಷ್ಟಪಡಿಸಿದರು. ಫಸಲ್ ಬಿಮಾ ಯೋಜನೆಯಲ್ಲಿ ಖಾಸಗಿ ಕಂಪನಿಗಳು ಲಾಭ ಪಡೆದುಕೊಳ್ಳುತ್ತಿವೆ. ಇದರಿಂದ ರೈತರಿಗೆ ನ್ಯಾಯ ಸಿಗುತ್ತಿಲ್ಲ. ಇದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಪ್ರಮುಖ ಕಾರಣವಾಗಿದೆ ಎಂದು ದೂರಿದರು.

loader