ಪ್ಯಾರೀಸ್ ಹವಾಮಾನ ಒಪ್ಪಂದದಿಂದ ಹಿಂದೆ ಸರಿದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರದಿಂದ ಭಾರತ-ಅಮೇರಿಕಾ ಬಾಂಧವ್ಯದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲವೆಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ನವದೆಹಲಿ (ಜೂ.05): ಪ್ಯಾರೀಸ್ ಹವಾಮಾನ ಒಪ್ಪಂದದಿಂದ ಹಿಂದೆ ಸರಿದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರದಿಂದ ಭಾರತ-ಅಮೇರಿಕಾ ಬಾಂಧವ್ಯದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲವೆಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಬರಾಕ್ ಒಬಾಮ ಅಧ್ಯಕ್ಷೀಯ ಅವಧಿಯಲ್ಲಿ ಉಭಯ ದೇಶಗಳ ಸಂಬಂಧ ವೃದ್ದಿಸಿತ್ತು. ನೂತನ ಎಚ್1ಬಿ ವೀಸಾ ಭಾರತಕ್ಕೆ ಪ್ರಮುಖ ವಿಷಯವಾಗಿದೆ ಎಂದು ಸ್ವರಾಜ್ ಹೇಳಿದ್ದಾರೆ.
ವಿದೇಶಾಂಗ ಸಚಿವಾಲಯದ ವಾರ್ಷಿಕ ಪತ್ರಿಕಾಗೋಷ್ಟಿಯಲ್ಲಿ ಕಳೆದ ಮೂರು ವರ್ಷದಲ್ಲಿ ಮೋದಿ ಸರ್ಕಾರದ ಸಾಧನೆಗಳ ಬಗ್ಗೆ ಒತ್ತು ನೀಡುತ್ತಾ, ತೊಂದರೆಯಲ್ಲಿ ಸಿಲುಕಿ ಹಾಕಿಕೊಂಡಿದ್ದ 80 ಸಾವಿರ ಜನರನ್ನು ವಾಪಸ್ ಭಾರತಕ್ಕೆ ಕರೆಸಿಕೊಳ್ಳಲಾಗಿದೆ. ಎಫ್’ಡಿಐ ದರ 37.5 ಕ್ಕೆ ಏರಿದೆ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಪಾಸ್ ಪೋರ್ಟ್ ಪಡೆಯಲು ಸಾಕಷ್ಟು ಹೊಸ ಕ್ರಮಗಳು ಮತ್ತು ಅಭಿವೃದ್ಧಿಯನ್ನು ಮಾಡಲಾಗಿದೆ ಎಂದಿದ್ದಾರೆ.
