Asianet Suvarna News Asianet Suvarna News

ಕೋಡಿ ಶ್ರೀ ಭವಿಷ್ಯದಂತೆ ಸಮ್ಮಿಶ್ರ ಸರ್ಕಾರಕ್ಕೆ ಇದೆಯಾ ಸಹೋದರರ ಕಂಟಕ?

ಶೀಘ್ರದಲ್ಲೇ ಉರುಳುತ್ತಾ ಕಾಂಗ್ರೆಸ್-ಜೆಡಿಎಸ್ ಸರ್ಕಾರ?! ಕೋಡಿ ಮಠದ ಶ್ರೀಗಳ ಭವಿಷ್ಯ ನಿಜವಾಗುತ್ತಾ?! ಸಮ್ಮಿಶ್ರ ಸರ್ಕಾರಕ್ಕೆ ಸಹೋದರರಿಂದ ಕಂಟಕ ಇದೆಯಾ?

ಬೆಂಗಳೂರು[ಸೆ.೧೪]: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಯಾವಾಗ ಪತನವಾಗುತ್ತೋ ಎನ್ನುವ ಡೋಲಾಯಮಾನ ಸ್ಥಿತಿಯಲ್ಲಿದೆ. ಹೀಗಿರುವಾಗ ಸಮ್ಮಿಶ್ರ ಸರ್ಕಾರದ ಮೇಲೆ ಕೋಡಿ ಮಠದ ಶ್ರೀ ಭವಿಷ್ಯ ನುಡಿದಿದ್ದಾರೆ.

ಸಮ್ಮಿಶ್ರ ಸರ್ಕಾರಕ್ಕೆ ಸಹೋದರರಿಂದ ಕಂಟಕ ಇದೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ಭವಿಷ್ಯ ನುಡಿದಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದೆ. ರಾಜ್ಯ ಸರ್ಕಾರಕ್ಕೆ ಸಹೋದರರಿಂದ ಕಂಟಕವಿದ್ದು, ನವೆಂಬರ್ ತಿಂಗಳವರೆಗೂ ರಾಜಕೀಯ ಪರಿಸ್ಥಿತಿ ಡೋಲಾಯಮಾನವಾಗಿರುತ್ತದೆ ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ..