ಕಳೆದ ಬಾರಿ ಸ್ವಚ್ಛತೆಯಲ್ಲಿ ಅಗ್ರಗಣ್ಯ ಸ್ಥಾನ ಪಡೆದಿದ್ದ ಮೈಸೂರು 5 ನೇ ಸ್ಥಾನಕ್ಕೆ ಕುಸಿದಿದೆ. ಮಧ್ಯಪ್ರದೇಶದ ಇಂದೋರ್ ಮೊದಲ ಸ್ಥಾನ ಪಡೆದುಕೊಂಡಿದೆ. ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ ನಡೆಸಿದ  ಸ್ಚಚ್ಚ ಸಮೀಕ್ಷೆ 2017 ರ ವರದಿಯನ್ನು ಕೇಂದ್ರ ನಗರಾಭಿವೃದ್ದಿ ಸಚಿವ ವೆಂಕಯ್ಯ ನಾಯ್ಡು ಬಿಡುಗಡೆಗೊಳಿಸಿದರು.

ನವದೆಹಲಿ (ಮೇ.04): ಕಳೆದ ಬಾರಿ ಸ್ವಚ್ಛತೆಯಲ್ಲಿ ಅಗ್ರಗಣ್ಯ ಸ್ಥಾನ ಪಡೆದಿದ್ದ ಮೈಸೂರು 5 ನೇ ಸ್ಥಾನಕ್ಕೆ ಕುಸಿದಿದೆ. ಮಧ್ಯಪ್ರದೇಶದ ಇಂದೋರ್ ಮೊದಲ ಸ್ಥಾನ ಪಡೆದುಕೊಂಡಿದೆ. ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ ನಡೆಸಿದ ಸ್ಚಚ್ಚ ಸಮೀಕ್ಷೆ 2017 ರ ವರದಿಯನ್ನು ಕೇಂದ್ರ ನಗರಾಭಿವೃದ್ದಿ ಸಚಿವ ವೆಂಕಯ್ಯ ನಾಯ್ಡು ಬಿಡುಗಡೆಗೊಳಿಸಿದರು.

434 ನಗರಗಳನ್ನು ಸಮೀಕ್ಷೆ ನಡೆಸಿದ್ದು ಆ ಪೈಕಿ ಮಧ್ಯಪ್ರದೇಶದ ಇಂದೋರ್ ಅತ್ಯಂತ ಸ್ವಚ್ಚ ನಗರಿ ಹೆಗ್ಗಳಿಕೆಗೆ ಪಾತ್ರವಾಗಿದೆ. ಅದೇ ರೀತಿ ಭೂಪಾಲ್ 2 ನೇ ಸ್ಥಾನದಲ್ಲಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ 3 ನೇ ಸ್ಥಾನದಲ್ಲಿದೆ. ಗುಜರಾತ್ ನ ಸೂರತ್ 4 ನೇ ಸ್ಥಾನದಲ್ಲಿದೆ. ಕಳೆದ ವರ್ಷ ಅಗ್ರ ಸ್ಥಾನದಲ್ಲಿದ್ದ ಮೈಸೂರು ಈ ಬಾರಿ 5 ನೇ ಸ್ಥಾನಕ್ಕೆ ಕುಸಿದಿದೆ. ಉತ್ತರ ಪ್ರದೇಶದ ಗೋಂಡಾ ಅತ್ಯಂತ ಕೊಳಕು ಎನ್ನುವ ಕುಖ್ಯಾತಿಗೆ ಪಾತ್ರವಾಗಿದೆ.

434 ನಗರಗಳಲ್ಲಿ ಸಮಿಕ್ಷೆ ನಡೆಸಲಾಗಿದೆ. 18 ಲಕ್ಷಕ್ಕೂ ಹೆಚ್ಚು ಜನರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಪ್ರಧಾನಿಯವರ ಮಹತ್ವಾಕಾಂಕ್ಷೆ ಯೋಜನೆ ಸ್ವಚ್ಚ ಭಾರತ್ ಗೆ ಜನರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಸಮೀಕ್ಷೆಯ ಫಲಿತಾಂಶ ಪ್ರೋತ್ಸಾಹದಾಯಕವಾಗಿದೆ. ಸ್ವಚ್ಚ ಭಾರತವು ಪರಿಣಾಮಕಾರಿಯಾಗಿ ಜಾರಿಯಾಗಿದೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.