ಸ್ವಾಮಿ ವಿವೇಕಾನಂದ ಹಾಗೂ ಸಮಾಜ ಸುಧಾರಕರಾಗಿದ್ದ ಬಸವಣ್ಣ ಅವರದ್ದು ಸಹಜ ಸಾವಲ್ಲ. ಅವರನ್ನು ಹತ್ಯೆ ಮಾಡಲಾಗಿತ್ತು ಎಂದು ಕೆ .ಎಸ್ ಭಗವಾನ್ ವಿವಾದಿತ ಹೇಳಿಕೆ ನೀಡಿದ್ದಾರೆ.
ಮೈಸೂರು : ಸ್ವಾಮಿ ವಿವೇಕಾನಂದ ಹಾಗೂ ಬಸವಣ್ಣ ಅವರನ್ನು ಪಿತೂರಿ ಮಾಡಿ ಕೊಲ್ಲಲಾಗಿದೆ ಎಂದು ಪ್ರಗತಿ ಪರ ಚಿಂತಕ ಕೆ.ಎಸ್ ಭಗವಾನ್ ವಿವಾದಾತ್ಮಕ ಹೇಳಿದ್ದಾರೆ.
ಸ್ವಾಮಿ ವಿವೇಕಾನಂದರು ಬೌದ್ಧ ಧರ್ಮದ ವಿಚಾರ ಧಾರೆಗಳ ಕುರಿತು ಮಾತನಾಡಲಾರಂಭಿಸಿದ್ದರು. ಆ ಬಳಿಕವೇ ಅವರನ್ನು ಕತ್ತು ಹಿಸುಕಿ ಕೊಂದಿರುವ ಅನುಮಾನವಿದೆ. ಯುವಕರಾಗಿದ್ದ ಸ್ವಾಮಿ ವಿವೇಕಾನಂದರು ಏಕಾಏಕಿ ಸಾವನ್ನಪ್ಪಲು ಸಾಧ್ಯವೇ ಇಲ್ಲ.
ಅದೇ ರೀತಿ ಸಮಾಜ ಸುಧಾರಕರಾಗಿದ್ದ ಬಸವಣ್ಣನವರನ್ನು ಕೊಲೆ ಮಾಡಲಾಗಿದೆ. ಬಸವಣ್ಣನವರ ವಚನ ಚಳವಳಿಯನ್ನು ಸಹಿಸದವರು ಅವರನ್ನೂ ಕೂಡ ಕೊಂದರು. ಬಸವಣ್ಣನವರು ಕೂಡಲ ಸಂಗಮದ ಕಲ್ಯಾಣದಲ್ಲಿ ಐಕ್ಯರಾದರೆಂಬುದು ಶುದ್ದ ಸುಳ್ಳು ಎಂದರು.
ಇನ್ನು ಜಾತಿ ವ್ಯವಸ್ಥೆ ವಿರುದ್ಧ ಚಳುವಳಿ ಹುಟ್ಟು ಹಾಕಿದವರು ಬಸವಣ್ಣನವರು. ಅಂತಹ ಬಸವಣ್ಣ ಏಕೆ ಐಕ್ಯರಾಗಿ ಸಾಯುತ್ತಾರೆ ಎಂದಿದ್ದಾರೆ. ಕೈಲಾಸ, ಸ್ವರ್ಗ ಎಂಬುದು ಏನೂ ಇಲ್ಲಾ. ಇವೆಲ್ಲವೂ ಕೂಡ ಕೇವಲ ಕಲ್ಪನೆಗಳು ಎಂದು ಭಗವಾನ್ ಹೇಳಿದರು.
ಮಹಿಷ ದಸರ ಆಚರಣೆ : ಮಹಿಷ ದಸರಾವನ್ನು ರಾಜ್ಯ ಸರ್ಕಾರವೇ ಆಚರಿಸಬೇಕು ಎಂದು ಪ್ರಗತಿಪರ ಚಿಂತಕ ಸಾಹಿತಿ ಕೆ.ಎಸ್ ಭಗವಾನ್ ಆಗ್ರಹಿಸಿದ್ದಾರೆ. ಮಹಿಷ ದಸರಾ ಪ್ರತಿಷ್ಠಾನ ಸಮಿತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಭಗವಾನ್ ಈ ಹೇಳಿಕೆ ನೀಡಿದ್ದಾರೆ.
ಚಾಮುಂಡಿ ದಸರಾದಂತೆಯೇ ಮಹಿಷ ದಸರಾವನ್ನು ರಾಜ್ಯ ಸರ್ಕಾರವೇ ಆಚರಣೆ ಮಾಡುವುದು ಒಳಿತು. ಆದರೆ ಕಳೆದ ನಾಲ್ಕು ವರ್ಷಗಳಿಂದ ಮಹಿಷ ದಸರಾ ಪ್ರತಿಷ್ಠಾನ ಸಮಿತಿ ಸ್ವಂತ ಖರ್ಚಿನಿಂದ ಆಚರಿಸಿಕೊಂಡು ಬಂದಿದೆ. ದಸರಾ ಜಂಬೂ ಸವಾರಿ ರೀತಿ ಆನೆಯ ಮೇಲೆ ಮಹಿಷನ ಪ್ರತಿಮೆಯನ್ನು ಕೂರಿಸಿ ಮೆರವಣಿಗೆ ಮಾಡಬೇಕು. ಬರುವ ಅಕ್ಟೋಬರ್ 7ರಂದು ನಡೆಯುವ ಮಹಿಷ ದಸರಾವನ್ನು ರಾಜ್ಯ ಸರ್ಕಾರವೇ ಆಚರಿಸಬೇಕು ಎಂದು ಭಗವಾನ್ ಆಗ್ರಹಿಸಿದ್ದಾರೆ. ಅಲ್ಲದೇ ಈ ಮೂಲಕ ಪ್ರಾಚೀನ ಪಕ್ಷಾಚರಣೆಯ ದ್ರಾವಿಡ ಸಂಸ್ಕೃತಿಯನ್ನು ಸರ್ಕಾರ ಪ್ರೋತ್ಸಾಹಿಸಬೇಕು ಎಂದು ಆಗ್ರಹಿಸಿದ ಭಗವಾನ್.
