ಚುನಾವಣೆಗೆ ಸ್ಪರ್ಧಿಸಲು ರಾಮಾರೂಢ ಶ್ರೀ ನಿರ್ಧಾರ

First Published 2, Apr 2018, 7:42 AM IST
Swamiji decides to contest Karnataka Assembly Election
Highlights

ಜಿಲ್ಲೆಯ ಬೀಳಗಿ ವಿಧಾನಸಭಾ ಕ್ಷೇತ್ರದಿಂದ ನಾನು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದು ನಿಶ್ಚಿತ. ಬಿಜೆಪಿ, ಜೆಡಿಎಸ್‌ ಟಿಕೆಟ್‌ ಕೇಳಿದ್ದೇನೆ. ಅವರು ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ರಾಮಾರೂಢ ಮಠದ ಪರಮರಾಮಾರೂಢ ಶ್ರೀಗಳು ಹೇಳಿದರು.

ಬಾಗಲಕೋಟೆ: ಜಿಲ್ಲೆಯ ಬೀಳಗಿ ವಿಧಾನಸಭಾ ಕ್ಷೇತ್ರದಿಂದ ನಾನು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದು ನಿಶ್ಚಿತ. ಬಿಜೆಪಿ, ಜೆಡಿಎಸ್‌ ಟಿಕೆಟ್‌ ಕೇಳಿದ್ದೇನೆ. ಅವರು ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ರಾಮಾರೂಢ ಮಠದ ಪರಮರಾಮಾರೂಢ ಶ್ರೀಗಳು ಹೇಳಿದರು.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಠದ ಭಕ್ತರ ಹಾಗೂ ಬೀಳಗಿ ಕ್ಷೇತ್ರದ ಮತದಾರರ ಒತ್ತಾಯದಂತೆ ನಾನು ರಾಜಕೀಯ ಪ್ರವೇಶಿಸಿದ್ದೇನೆ. ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವರಿಗೆ ಟಿಕೆಟ್‌ ನೀಡುವಂತೆ ಮನವಿ ಮಾಡಿದ್ದೆ. ಬಿಜೆಪಿ ಮೊದಲ ಆದ್ಯತೆ. ಆದರೆ, ಅವರಿಂದ ಯಾವುದೇ ಉತ್ತರ ಬಂದಿಲ್ಲ. ಬಳಿಕ ಜೆಡಿಎಸ್‌ ಜಿಲ್ಲಾಧ್ಯಕ್ಷ ರವಿ ಹುಣಶ್ಯಾಳ ಅವರಿಗೂ ಜೆಡಿಎಸ್‌ ಟಿಕೆಟ್‌ ನೀಡುವಂತೆ ಮನವಿ ಮಾಡಿದ್ದೆ. ಅವರಿಂದಲೂ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ, ಭಕ್ತರು ಹಾಗೂ ಮತದಾರರು ಪಕ್ಷೇತರರಾಗಿ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ. ಹಾಗಾಗಿ, ಇನ್ನೊಂದು ವಾರ ಕಾದುನೋಡುತ್ತೇನೆ. ಟಿಕೆಟ್‌ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುವುದು ಖಚಿತ ಎಂದರು.

loader