ನವದೆಹಲಿ (ಜ. 18): ಹಂದಿ ಜ್ವರದಿದ ಬಳಲುತ್ತಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಪಕ್ಷ ಅಧಿಕೃತವಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

‘ಹಠಾತ್ ಕಾಣಿಸಿಕೊಂಡ ಜ್ವರಕ್ಕೆ ಚಿಕಿತ್ಸೆ ಪಡೆಯಲು ಶಾ ಬುಧವಾರ ಏಮ್ಸ್‌ಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. 2 ದಿನದಲ್ಲಿ ಅವರು ಬಿಡುಗಡೆ ಆಗಲಿದ್ದಾರೆ.ಬೇಗ ಗುಣಮುಖರಾಗುವಂತೆ ಹಾರೈಸಿದ ಎಲ್ಲರಿಗೂ ಅಭಿನಂದಿಸಿದ್ದಾರೆ’ ಎಂದು ಪಕ್ಷದ ಮಾಧ್ಯಮ ವಕ್ತಾರ, ರಾಜ್ಯಸಭಾ ಸದಸ್ಯ  ಅನಿಲ್ ಬಲುನಿ ತಿಳಿಸಿದ್ದಾರೆ.