ರಾಜ್ಯದಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೆ ಇದೊಂದು ಎಚ್ಚರಿಕೆ. ತಿರುಪತಿಯಲ್ಲಿ ಹಂದಿಜ್ವರದ ಸೋಂಕು ಕಾಣಿಸಿಕೊಂಡಿದೆ.

ತಿರುಪತಿ[ಅ.1] ತಿರುಪತಿ ತಿರುಮಲದಲ್ಲಿ ಹಂದಿ ಜ್ವರದ ಸೋಂಕು ಕಾಣಿಸಿಕೊಂಡಿದೆ. ಸೋಂಕಿನ ಪರಿಣಾಮ ಒಬ್ಬರು ಮೃತಪಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೂವರಲ್ಲಿ ಸೋಂಕು ಕಾಣಿಸಿಕೊಂಡಿದ್ದು ಸಕಲ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಚಿತ್ತೂರು ಜಿಲ್ಲಾಧಿಕಾರಿ ಪಿ.ಎಸ್.ಪ್ರದ್ಯುಮ್ನ ತಿಳಿಸಿದ್ದಾರೆ.

ಎಚ್‌ 1ಎನ್‌1 ಲಕ್ಷಣ ಕಂಡು ಬಂದ ಮೂವರು ಭಕ್ತರನ್ನು ತಿರುಪತಿಯ ಶ್ರೀ ವೆಂಕಟೇಶ್ವರ ವೈದ್ಯ ವಿಜ್ಞಾನ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಮಾರುಕಟ್ಟೆಗಳಲ್ಲಿ ಮಾಸ್ಕ್ ಬಳಸಿ ಓಡಾಡಲು ತಿಳಿಸಲಾಗಿದೆ.