ಗೌಡರ ವಿರುದ್ಧ ಶರವಣ ಗುಡುಗು..!

ಬೆಂಗಳೂರು[ಜೂ.05]: ಎಂಎಲ್’ಸಿಗಳಿಗೆ ಸಚಿವ ಸ್ಥಾನ ನೀಡದಿರುವ ಜೆಡಿಎಸ್ ನಿರ್ಧಾರದ ಬಗ್ಗೆ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ ದೇವೇಗೌಡರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಬೇಕು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಎಂದು ದೇವರಲ್ಲಿ ಹರಕೆ ಹೊತ್ತಿದ್ದೆ. ಆದರೆ ಈಗ ಪಕ್ಷದ ಶಾಸಕಾಂಗ ಸಭೆಯಿಂದಲೇ ನನ್ನನ್ನು ದೂರ ಇಟ್ಟಿದ್ದಾರೆ ಎಂದು ತಮ್ಮ ಆಪ್ತರ ಬಳಿ ಸರವಣ ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿಯಾಗಿದೆ.

Comments 0
Add Comment