ಶಾಸಕ ಜಮೀರ್ ಅಹಮದ್‌’ಗೆ ತಾಕತ್ತಿದ್ದರೆ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರ ಬಿಟ್ಟು ರಾಜ್ಯದ ಇತರ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲಿ ಎಂದು ವಿಧಾನ ಪರಿಷತ್ ಸದಸ್ಯ ಶರವಣ ಸವಾಲೆಸೆದಿದ್ದಾರೆ.
ಕೋಲಾರ: ಶಾಸಕ ಜಮೀರ್ ಅಹಮದ್’ಗೆ ತಾಕತ್ತಿದ್ದರೆ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರ ಬಿಟ್ಟು ರಾಜ್ಯದ ಇತರ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲಿ ಎಂದು ವಿಧಾನ ಪರಿಷತ್ ಸದಸ್ಯ ಶರವಣ ಸವಾಲೆಸೆದಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮೀರ್ ಅವರನ್ನು ಸೋಲಿಸಲು ರೇವಣ್ಣ ಬೇಕಾಗಿಲ್ಲ, ನನ್ನಂಥ ಸಾಮಾನ್ಯ ಕಾರ್ಯಕರ್ತ ಸಾಕು ಎಂದು ಪುನರುಚ್ಚರಿಸಿದರು.
ಚಾಮರಾಜಪೇಟೆ ವಿಧಾನಸಭಾ ಚುನಾವಣೆಗೆ ನೀವು ಸ್ಪರ್ಧಿಸುತ್ತಿರಾ ಎಂಬ ಪ್ರಶ್ನೆಗೆ, ‘ಪಕ್ಷದ ವರಿಷ್ಠರು ಆದೇಶ ನೀಡಿದರೆ ರಾಜ್ಯದ ಯಾವುದೇ ಕ್ಷೇತ್ರದಲ್ಲಾದರೂ ಸ್ಪರ್ಧಿಸುತ್ತೇನೆ ಎಂದು ಶರವಣ ಉತ್ತರಿಸಿದರು.
ಶಾಸಕ ಜಮೀರ್ ಆಹಮದ್ ಅವರನ್ನು ಜೆಡಿಎಸ್ನಿಂದ ಹೊರಹಾಕಲಾಗಿದೆ. ಪಕ್ಷ ಹಾಗೂ ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ. ಗೌಡರ ಬಗ್ಗೆ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿರಬೇಕು. ಯಾರೇ ಹಗುರವಾಗಿ ಮಾತನಾಡಿದರು ಬೆಲೆ ತೆರೆಯಬೇಕಾಗುತ್ತದೆ ಎಂದು ಎಚ್ಚರಿಸಿದರು.
