ಹೆಚ್ಚುತ್ತಿರುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣಕ್ರಮ ಜರುಗಿಸುವಂತೆ ರಾಜ್ಯ ಪೊಲೀಸ್ ಠಾಣೆಗಳಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಆರ್.ಕೆ ದತ್ತಾ ಖಡಕ್ ಸೂಚನೆ ನೀಡಿದ್ದಾರೆ.  

ಬೆಂಗಳೂರು (ಸೆ.14): ಹೆಚ್ಚುತ್ತಿರುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣಕ್ರಮ ಜರುಗಿಸುವಂತೆ ರಾಜ್ಯ ಪೊಲೀಸ್ ಠಾಣೆಗಳಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಆರ್.ಕೆ ದತ್ತಾ ಖಡಕ್ ಸೂಚನೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಮಾಜಘಾತುಕ ಚಟುವಟಿಕೆಗಳು ನಡೆಯದಂತೆ ಎಚ್ಚರಿಕೆ ವಹಿಸಿ. ಗೂಂಡಾಗಿರಿ ತೋರುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಿ. ಬೀದಿ ಕಾಮಣ್ಣರ ಬಗ್ಗೆ ಮಾಹಿತಿ ಸಂಗ್ರಹಿಸಿ. ಮೀಟರ್ ಬಡ್ಡಿ ಮಾಡುವವರ ವಿರುದ್ಧ ಕಠಿಣ ಕ್ರಮ ಸೇರಿದಂತೆ 16 ಅಂಶಗಳನ್ನ ಒಳಗೊಂಡ ಸುತ್ತೋಲೆಯನ್ನು ರಾಜ್ಯ ದ ಎಲ್ಲಾ ಎಸ್ ಪಿ, ಐಜಿಪಿ , ಉಪಪೊಲೀಸ್ ಆಯುಕ್ತರು, ಮತ್ತು ನಗರ ಪೊಲೀಸ್ ಆಯುಕ್ತರು ಸೇರಿದಂತೆ ಸಂಚಾರಿ ಪೊಲೀಸ್ ಇಲಾಖೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಆರ್ ಕೆ.ದತ್ತಾ ಖಡಕ್ ವಾರ್ನಿಂಗ್ ಮಾಡಿದ್ದಾರೆ.