ನವದೆಹಲಿ (ಅ.11): ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಇತರ ಖಾತೆಗಳನ್ನು ಹಣಕಾಸು ಸಚಿವ ಒ.ಪನ್ನೀರ್ ಸೆಲ್ವಂಗೆ ವಹಿಸಲಾಗಿದೆ.
ನವದೆಹಲಿ (ಅ.11): ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಇತರ ಖಾತೆಗಳನ್ನು ಹಣಕಾಸು ಸಚಿವ ಒ.ಪನ್ನೀರ್ ಸೆಲ್ವಂಗೆ ವಹಿಸಲಾಗಿದೆ.
ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸುವ ಅಧಿಕಾರವನ್ನು ಪನ್ನೀರ್ ಸೆಲ್ವಂಗೆ ನೀಡಲಾಗಿದೆ.
ತಮಿಳುನಾಡು ಸಿಎಂ ಜಯಲಲಿತಾ ಕಳೆದ 3 ವಾರಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಹಣಕಾಸು ಸಚಿವ ಪನ್ನೀರ್ ಸೆಲ್ವಂಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಜಯಲಲಿತಾರ ಸಲಹೆ ಮೇರೆಗೆ ಈ ಕ್ರಮ ಕೈಗೊಂಡಿರುವುದಾಗಿ ತಮಿಳುನಾಡು ರಾಜಭವನ ಪ್ರಕಟಣೆ ತಿಳಿಸಿದ್ದು ಜಯಲಲಿತಾ ಗುಣಮುಖರಾಗುವ ತನಕ ಈ ವ್ಯವಸ್ಥೆ ಮುಂದುವರೆಯಲಿದೆ.