1998ರಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದ ಹಾಲಿ ಸಚಿವನಿಗೆ 3 ವರ್ಷ ಜೈಲು ಹಾಗೂ 10,500 ರು. ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರು ಆ ಸಚಿವ?

ಚೆನ್ನೈ, [ಜ.07]: ತಮಿಳುನಾಡಿನ ಹಾಲಿ ಯುವಜನ ಕಲ್ಯಾಣ ಮತ್ತು ಕ್ರೀಡಾ ಸಚಿವ ಬಾಲಕೃಷ್ಣ ರೆಡ್ಡಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

1998ರಲ್ಲಿ ಎಐಎಡಿಎಂಕೆ ಪಕ್ಷ ಕೈಗೊಂಡಿದ್ದ ಪ್ರತಿಭಟನೆ ವೇಳೆ ಕಲ್ಲು ತೂರಾಟ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಬಾಲಕೃಷ್ಣ ರೆಡ್ಡಿಗೆ 3 ವರ್ಷ ಜೈಲು ಹಾಗೂ 10,500 ರು. ದಂಡ ವಿಧಿಸಿ ಆದೇಶ ಹೊರಡಿಸಿದೆ.

1998 ರಲ್ಲಿ ಎಐಎಡಿಎಂಕೆ ಪಕ್ಷ ಕೈಗೊಂಡಿದ್ದ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಸಾರ್ವಜನಿಕ ಆಸ್ತಿ, ಪಾಸ್ತಿಗೆ ಹಾನಿ ಮಾಡಿರುವ ಸಂಬಂಧ ಬಾಲಕೃಷ್ಣ ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. 

ಪ್ರತಿಭಟನೆ ವೇಲೆ ಬಾಲಕೃಷ್ಣ ರೆಡ್ಡಿ ಅಪರಾಧ ಚಟುವಟಿಕೆಯಲ್ಲಿ ತೊಡಗಿರೋದು ಸಾಬೀತಾದ ಹಿನ್ನೆಲೆಯಲ್ಲಿ ಇಂದು [ಸೋಮವಾರ] ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಇನ್ನು ಬಾಲಕೃಷ್ಣ ರೆಡ್ಡಿ ಅವರು ಕೋರ್ಟ್​ ತೀರ್ಪು ಪ್ರಶ್ನಿಸಿ ನಾಳೆ (ಸೋಮವಾರ) ಮದ್ರಾಸ್​ ಹೈಕೋರ್ಟ್​ ಮೆಟ್ಟಿಲೇರಲಿರುವ ಸಾಧ್ಯತೆಗಳಿವೆ.