ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರ ಅನುಮೋದಿಸಿದ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಕುರಿತು ಕರ್ನಾಟಕ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಹೇಳಿಕೆಯನ್ನು ತಮಿಳುನಾಡಿನ ಬಿಜೆಪಿ ಘಟಕ ಖಂಡಿಸಿದೆ. 

ಕೋಯಮತ್ತೂರು: ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರ ಅನುಮೋದಿಸಿದ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಕುರಿತು ಕರ್ನಾಟಕ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಹೇಳಿಕೆಯನ್ನು ತಮಿಳುನಾಡಿನ ಬಿಜೆಪಿ ಘಟಕ ಖಂಡಿಸಿದೆ. 

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಂಬಂಧ ತಾವು ಎತ್ತಿರುವ ಆಕ್ಷೇಪಗಳನ್ನು ಸರಿಪಡಿಸಬೇಕು. ಆ ನಂತರವಷ್ಟೇ ಸಂಸತ್ತು ಅನುಮೋದಿಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ರಚಿಸಬೇಕು. ಬಳಿಕ ಅದಕ್ಕೆ ರಾಜ್ಯದ ಪ್ರತಿನಿಧಿಗಳನ್ನು ನಾಮ ನಿರ್ದೇಶನ ಮಾಡಲಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. 

ಇಂಥದ್ದೊಂದು ಹೇಳಿಕೆ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗೆಜೆಟ್‌ ಅಧಿಸೂಚನೆ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನೇ ಪ್ರಶ್ನಿಸಿದ್ದಾರೆ. ಹಾಗಾಗಿ, ಎಚ್‌ಡಿಕೆ ಅವರ ಹೇಳಿಕೆಯು ಖಂಡನೆಗೆ ಆರ್ಹವಾಗಿದೆ ಎಂದು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷೆ ತಮಿಳ್‌ಸಾಯ್‌ ಸುಂದರರಾಜನ್‌ ಅವರು ಹೇಳಿದರು.