ಚೆನ್ನೈ (ಸೆ.24): ತೀವ್ರ ಜ್ವರ ಮತ್ತು ನಿರ್ಜಲೀಕರಣದಿಂದ ಬಳಲುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಯಲಲಿತಾ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗುತ್ತಿದೆ ಎಂದು ಅಪೊಲೊ ಆಸ್ಪತ್ರೆ ಬಿಡುಗಡೆ ಮಾಡಿದ ಮೆಡಿಕಲ್‌ ಬುಲೆಟಿನ್‌ನಲ್ಲಿ ಉಲ್ಲೇಖಿಸಲಾಗಿದೆ. ಮತ್ತೊಂದೆಡೆ ಮುಖ್ಯಮಂತ್ರಿ ಜಯಲಲಿತಾರ ಆರೋಗ್ಯದಲ್ಲಿ ಚೇತರಿಕೆ ಕಾರಣದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಕರೆದೊಯ್ಯಲಾಗುತ್ತದೆ ಎಂಬ ವರದಿಗಳನ್ನು ಆಡಳಿತಾರೂಡ ಎಐಎಡಿಎಂಕೆ ತಳ್ಳಿಹಾಕಿದೆ.

ಮತ್ತೊಂದೆಡೆ ಕರ್ನಾಟಕದಲ್ಲಿ ವಿಶೇಷ ಅಧಿವೇಶನ ನಡೆಸಿದಂತೆ ತಮಿಳುನಾಡಿನಲ್ಲೂ ವಿಶೇಷ ಅಧಿವೇಶನ ನಡೆಸಬೇಕೆಂಬ ಡಿಎಂಕೆ ಬೇಡಿಕೆಯನ್ನು ಅದು ತಿರಸ್ಕರಿಸಿದೆ. ಹಿರಿಯ ನಟ ರಜನಿಕಾಂತ್‌ ಜಯಾ ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಟ್ವೀಟ್‌ ಮಾಡಿದ್ದಾರೆ. ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ಎಐಎಡಿಎಂಕೆ ಕಾರ್ಯಕರ್ತರು ಅಮ್ಮಾ ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.