ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಖ್ಯಾತೆ ತೆಗೆದಿದೆ. ನೀರು ಕೇಳಿ ಸುಪ್ರೀಂಕೋರ್ಟ್​ನಲ್ಲಿ ತಮಿಳುನಾಡು ಮುಖಭಂಗಕ್ಕೀಡಾಗಿದೆ.  

ನವದೆಹಲಿ (ನ.21): ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಖ್ಯಾತೆ ತೆಗೆದಿದೆ. ನೀರು ಕೇಳಿ ಸುಪ್ರೀಂಕೋರ್ಟ್​ನಲ್ಲಿ ತಮಿಳುನಾಡು ಮುಖಭಂಗಕ್ಕೀಡಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕರ್ನಾಟಕ 53 ಟಿಎಂಸಿ ನೀರು ಬಿಡುವಂತೆ ತಮಿಳುನಾಡು ಸುಪ್ರೀಂಕೋರ್ಟ್ ಎದುರು ಬೇಡಿಕೆ ಇಟ್ಟಿದ್ದು, ಮಧ್ಯಂತರ ಅರ್ಜಿ ಸಲ್ಲಿಸಲು ಅವಕಾಶ ಕೋರಿದೆ. ತಮಿಳುನಾಡಿನ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಪ್ರಕರಣ ಈಗಾಗಲೇ ನ್ಯಾಯಾಲಯದ ವ್ಯಾಪ್ತಿಯಲ್ಲಿದ್ದು, ತೀರ್ಪು ಕಾದಿರಿಸಿದ್ದೇವೆ. ಈ ಸಂದರ್ಭದಲ್ಲಿ ಮಧ್ಯಂತರ ಅರ್ಜಿ ಸಲ್ಲಿಕೆಗೆ ಅವಕಾಶ ಇಲ್ಲ ಎಂದು ಮುಖ್ಯ ನ್ಯಾ. ದೀಪಕ್ ಮಿಶ್ರಾ ಅವರಿದ್ದ ತ್ರಿಸದಸ್ಯ ಪೀಠ ಹೇಳಿದೆ.