ತಮಿಳುನಾಡಿನಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಹಿನ್ನೆಲೆಯಲ್ಲಿ ಕಾವೇರಿ ಸಂಘರ್ಷ ಬಿಟ್ಟು ಸಂಧಾನಕ್ಕೆ ಮುಂದಾಗಿದೆ.
ಬೆಂಗಳೂರು (ಏ.01): ತಮಿಳುನಾಡಿನಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಹಿನ್ನೆಲೆಯಲ್ಲಿ ಕಾವೇರಿ ಸಂಘರ್ಷ ಬಿಟ್ಟು ಸಂಧಾನಕ್ಕೆ ಮುಂದಾಗಿದೆ.
ಇಂದು ತಮಿಳುನಾಡು ಮುಖ್ಯ ಕಾರ್ಯದರ್ಶಿ ಶಿವದಾಸ್ ಮೀನಾ ನೇತೃತ್ವದಲ್ಲಿ ನಾಲ್ವರು ಐಎಎಸ್ ಅಧಿಕಾರಿಗಳ ತಂಡ ಕರ್ನಾಟಕಕ್ಕೆ ಭೇಟಿ ನೀಡಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ ಖುಂಟಿ, ಜಲಸಂಪನ್ಮೂಲ ಇಲಾಖೆ ಪ್ರ.ಕಾರ್ಯದರ್ಶಿ ರಾಕೇಶ್ ಸಿಂಗ್ ಜೊತೆ ಚರ್ಚೆ ನಡೆಸಲಿದ್ದಾರೆ.
ಕಾವೇರಿ ಕೊಳ್ಳದಿಂದ ಸ್ವಲ್ಪ ನೀರು ಬಿಡುವಂತೆ ಮನವಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಇಂದು ಮಧ್ಯಾಹ್ನ 3ಗಂಟೆಗೆ ತಮಿಳುನಾಡು ಅಧಿಕಾರಿಗಳ ಜೊತೆ ವಿಧಾನ ಸೌಧದಲ್ಲಿ ಮಹತ್ವದ ಸಭೆ ನಡೆಯಲಿದೆ.
