ಬಿಜೆಪಿ ನಾಯಕರು ತನ್ವೀರ್ ಸೇಠ್ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು (ನ.11): ಅಶ್ಲೀಲ ಚಿತ್ರ ವೀಕ್ಷಣೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ತನ್ವೀರ್ ಸೇಠ್ ಬೆಂಬಲಿಗರು ಇಂದು ಸಚಿವರ ಪರವಾಗಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ತನ್ವೀರ್ ಸೇಠ್ ತುಂಬಾ ಒಳ್ಳೆಯ ವ್ಯಕ್ತಿ, ಬಿಜೆಪಿ ನಾಯಕರು ಅವರ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಪಸಂಖ್ಯಾತರನ್ನು ಮುಗಿಸಲು ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ; ತನ್ವೀರ್ ಸೇಠ್‌ಗೆ ಅಶ್ಲೀಲ ಚಿತ್ರ ಕಳುಹಿಸಿರುವುದು ಬಿಜೆಪಿ ನಾಯಕರು ಎಂದು ಬೆಂಬಲಿಗರು ಆರೋಪಿಸಿದ್ದಾರೆ.