ವಿದ್ಯಾರ್ಥಿಗಳ ಜೀವಕ್ಕೆ ಸಂಚಕಾರ ತರುತ್ತಿರುವ ‘ಬ್ಲೂವೇಲ್ ಚಾಲೆಂಜ್’ ಆನ್’ಲೈನ್ ಗೇಮ್ ಬಗ್ಗೆ ರಾಜ್ಯದ ಎಲ್ಲಾ ಶಾಲಾ ಕಾಲೆಜುಗಳಲ್ಲಿ ಜಾಗೃತಿ ಮೂಡಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು: ವಿದ್ಯಾರ್ಥಿಗಳ ಜೀವಕ್ಕೆ ಸಂಚಕಾರ ತರುತ್ತಿರುವ ‘ಬ್ಲೂವೇಲ್ ಚಾಲೆಂಜ್’ ಆನ್’ಲೈನ್ ಗೇಮ್ ಬಗ್ಗೆ ರಾಜ್ಯದ ಎಲ್ಲಾ ಶಾಲಾ ಕಾಲೆಜುಗಳಲ್ಲಿ ಜಾಗೃತಿ ಮೂಡಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದಲ್ಲದೆ, ರಾಜ್ಯ ಮತ್ತು ಕೇಂದ್ರ ಐಟಿ ಇಲಾಖೆಗಳಿಗೆ ಪತ್ರ ಬರೆದಿರುವ ಅವರು, ಅನಾರೋಗ್ಯಕರ ಅಂತರ್ಜಾಲ ತಾಣಗಳನ್ನು ನಿರ್ಬಂಧಿಸುವಂತೆ ಕೋರಿದ್ದಾರೆ. ಅಧಿಕಾರಿಗಳಿಗೆ ನೀಡಿರುವ ಸೂಚನೆಯಲ್ಲಿ ಅವರು, ಕೂಡಲೇ ಡಿಡಿಪಿಐಗಳು ಹಾಗೂ ಬಿಇಓಗಳು ಸುತ್ತೋಲೆ ಹೊರಡಿಸಿ ಶಾಲಾ-ಕಾಲೆಜುಗಳಲ್ಲಿ ಕರಪತ್ರ, ಬ್ಯಾನರ್ ಮತ್ತು ಪತ್ರಿಕಾ ಪ್ರಕಟಣೆ ಮೂಲಕ ವ್ಯಾಪಕ ಪ್ರಚಾರ ನೀಡುವ ಜತೆಗೆ ಅರಿವು ಮೂಡಿಸಬೇಕು. ಅನಾರೋಗ್ಯಕರ ವೆಬ್’ಸೈಟ್ ಬಳಸದಂತೆ ಮಕ್ಕಳಿಗೆ ತಿಳಿಸಬೇಕೆಂದು ನಿರ್ದೇಶಿಸಿದ್ದಾರೆ.
