ರೆಡ್ಡಿ ವಿರುದ್ದ ನ್ಯಾಯಾಲಯದಲ್ಲಿರುವ ಹಲವು ಪ್ರಕರಣಗಳಲ್ಲಿ ನಾನು ಸಾಕ್ಷಿಯಾಗಿದ್ದೇನೆ. ಹೀಗಾಗಿ ನನ್ನನ್ನು ಹತ್ಯೆಮಾಡಲು ಸಂಚು ರೂಪಿಸಿದ್ದಾರೆ
ಬಳ್ಳಾರಿ(ಆ.23): ನನಗೆ ಜೀವ ಬೇದರಿಕೆ ಇದೆ. ನನ್ನನ್ನ ಹತ್ಯೆಮಾಡಲು ಸುಪಾರಿ ನೀಡಿದ್ದಾರೆ ಎಂದು ಗಣಿ ಉದ್ಯಮಿ ಟಪಾಲ್ ಗಣೇಶ್ ಕಂಪ್ಲಿ ಶಾಸಕ ಸುರೇಶ್ ಬಾಬು ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.
ರೆಡ್ಡಿಗಳ ವಿರುದ್ಧ ಹೋರಾಟ ಮಾಡುತ್ತಿರುವ ಕಾರಣ ಈ ಹಿಂದೆಯು ರೆಡ್ಡಿ ಬೆಂಬಲಿಗರಾದ ಕಾರದಪುಡಿ ಮಹೇಶ ಮತ್ತು ಸ್ವಸ್ತಿಕ್ ನಾಗರಾಜ್ ಗುಂಪಿನಿಂದ ನನ್ನ ಮೇಲೆ ಹಲ್ಲೆ ನಡೆದಿತ್ತು. ರೆಡ್ಡಿ ವಿರುದ್ದ ನ್ಯಾಯಾಲಯದಲ್ಲಿರುವ ಹಲವು ಪ್ರಕರಣಗಳಲ್ಲಿ ನಾನು ಸಾಕ್ಷಿಯಾಗಿದ್ದೇನೆ. ಹೀಗಾಗಿ ನನ್ನನ್ನು ಹತ್ಯೆಮಾಡಲು ಸಂಚು ರೂಪಿಸಿದ್ದಾರೆ ಎಂದು ಟಪಾಲ್ ಗಣೇಶ್ ಆರೋಪಿಸಿದ್ದಾರೆ.
ಹತ್ತು ದಿನಗಳಲ್ಲಿ ನನ್ನ ಮೇಲೆ ಹಲ್ಲೆ ನಡೆಸುವ ಮಾಹಿತಿ ನನ್ನ ಮೂಲಗಳಿಂದ ತಿಳಿದು ಬಂದಿದೆ ಮತ್ತು ರೆಡ್ಡಿಗಳ ವಿರುದ್ಧ ಹೋರಾಟ ಮಾಡಿದ್ದ ಕಾಂಗ್ರೆಸ್ ಸರ್ಕಾರ ಪರೋಕ್ಷವಾಗಿ ಅವರಿಗೆ ಬೆಂಬಲ ಸೂಚಿಸಿದೆ ಎಂದು ಬಳ್ಳಾರಿ ಕಾಂಗ್ರೆಸ್ ಮುಖಂಡರ ವಿರುದ್ಧವು ಆರೋಪಿಸಿದ್ದಾರೆ.
