ಬೆಂಗಳೂರು,[ಅ.09]: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲಿಯೇ ತರಿಕೇರೆಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿ ಮಾಜಿ ಶಾಸಕರಾದ ಜಿ.ಎಚ್.ಶ್ರೀನಿವಾಸ ಮತ್ತು ಟಿ.ಎಚ್.ಶಿವಶಂಕರಪ್ಪ ಅವರು ಕಾಂಗ್ರೆಸ್  ಗೆ ಸೇರ್ಪಡೆಯಾದರು. ಇದೇ ವೇಳೆ ನಿವೃತ್ತಿ ಪೊಲೀಸ್ ಅಧಿಕಾರಿ ಶಿವಪ್ರಸಾದ್ ಅವರಿಗೆ ಪಕ್ಷದ ಭಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಬಳಿಕ ಮಾತನಾಡದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ತರಿಕೇರೆಯ ಇಬ್ಬರು ಮಾಜಿ ಶಾಸಕರು ನಮ್ಮ ಪಕ್ಷದಲ್ಲೇ ಇದ್ರು ಈಗ ವಾಪಸ್ ಆಗ್ತಿರೋದು ನಮಗೆ ಸಂತೋಷವಾಗ್ತಿದೆ, ಮುಂದಿನ ಲೋಕಸಭಾ ಚುನಾವಣೆಗೆ ತರೀಕೆರೆ ವಿಧಾನಕ್ಷೇತ್ರದಲ್ಲಿ ಹೆಚ್ಚು ಬಲಬಂದಂತಾಗಿದೆ ಎಂದರು.

ಜಿ.ಎಚ್.ಶ್ರೀನಿವಾಸ ಅವರು 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದು ಶಾಸಕರಾಗಿದ್ದರು. ನಂತರ ಇತ್ತೀಚೆಗೆ ನಡೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಜಿ.ಎಚ್.ಶ್ರೀನಿವಾಸ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು.