ಬೆಂಗಳೂರು, [ಜ.23]: 12 ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಹಲ್ಲೆ ನಡೆಸಿದ 34 ವರ್ಷದ ಇಂಗ್ಲಿಷ್ ಅಧ್ಯಾಪಕನನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.

6ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಪಾಠಕ್ಕೆ ಸಂಬಂಧಿಸಿದಂತೆ ಡೌಟ್ ಕ್ಲಿಯರ್ ಮಾಡಿಕೊಳ್ಳಲು ಇಂಗ್ಲಿಷ್ ಶಿಕ್ಷಕನ ಬಳಿಗೆ ಹೋಗಿದ್ದಾಳೆ. ಆದ್ರೆ ಆ ವೇಳೆ  ಶಿಕ್ಷಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದಾರೆ. 

ದೂರಿನ ಮೇರೆಗೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಶಿಕ್ಷಕನನ್ನು ಬಂಧಿಸಲಾಗಿದೆ.ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿ ಬಳಿಕ ನ್ಯಾಯಾಂಗ ಬಂಧನ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.