ರಾಜ್ಯದಲ್ಲಿ ಇಂದಿನಿಂದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.   10ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಚಾಲನೆ ನೀಡಿದ್ದಾರೆ.

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 10ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಚಾಲನೆ ನೀಡಿದ್ದಾರೆ.

ಈಗಾಗಲೇ ಪ್ರಗತಿಯಲ್ಲಿದ್ದ ನೇಮಕಾತಿಗೆ ವೇಗ ನೀಡಿದ್ದು, ಒಂದು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಗಿಸಲು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. 

ಇದೇ ವೇಳೆ 25 ಸಾವಿರ ಅಥಿತಿ ಶಿಕ್ಷಕರ ನೇಮಕಾತಿಗೂ ಕೂಡ ಸಚಿವ ಮಹೇಶ್ ಅವರು ಸೂಚನೆ ನೀಡಿದ್ದಾರೆ. ಈಗಾಗಲೇ 10 ಸಾವಿರ ಶಿಕ್ಷರ ನೇಮಕಾತಿ ಕೊನೆಯ ಹಂತದಲ್ಲಿದ್ದು, ಈ ನೇಮಕಾತಿ ಮುಗಿದ ನಂತರ ಕೆಲ ಅಥಿತಿ ಶಿಕ್ಷರನ್ನು ಕೈ ಬಿಡಲಾಗುವುದು ಎಂದು ಅವರು ಹೇಳಿದ್ದಾರೆ.