ಕಲಿಕೆಯಲ್ಲಿ ಹಿಂದುಳಿದ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ 9ಮತ್ತು 10ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕಾಗಿ ರಾಜ್ಯ ಸರ್ಕಾರ ಆರಂಭಿಸಿರುವ ಮಹತ್ವಾಕಾಂಕ್ಷಿ ‘ವಿಶ್ವಾಸ ಕಿರಣ’ ವಿಶೇಷ ತರಬೇತಿ ಯೋಜನೆಗೆ ಪ್ರೌಢಶಾಲಾ ಶಿಕ್ಷಕರ ಸಂಘವು ಆಕ್ಷೇಪ ವ್ಯಕ್ತಪಡಿಸಿದೆ.
ಬೆಂಗಳೂರು: ಕಲಿಕೆಯಲ್ಲಿ ಹಿಂದುಳಿದ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ 9ಮತ್ತು 10ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕಾಗಿ ರಾಜ್ಯ ಸರ್ಕಾರ ಆರಂಭಿಸಿರುವ ಮಹತ್ವಾಕಾಂಕ್ಷಿ ‘ವಿಶ್ವಾಸ ಕಿರಣ’ ವಿಶೇಷ ತರಬೇತಿ ಯೋಜನೆಗೆ ಪ್ರೌಢಶಾಲಾ ಶಿಕ್ಷಕರ ಸಂಘವು ಆಕ್ಷೇಪ ವ್ಯಕ್ತಪಡಿಸಿದೆ.
ರಾಜ್ಯ ಸರ್ಕಾರದ ಈ ಯೋಜನೆ ಅವೈಜ್ಞಾನಿಕವಾಗಿದೆ. ಸಾಮಾನ್ಯವಾಗಿ ದಸರಾ ರಜೆಯು ಮಕ್ಕಳಿಗೆ ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಒಂದೋ ರಿಲ್ಯಾಕ್ಸ್ ಮಾಡುವುದಕ್ಕಾಗಿ ಅಥವಾ ಕುಟುಂಬದೊಂದಿಗೆ ಬೆರೆಯುವುದಕ್ಕಾಗಿ ನೀಡಲಾಗುತ್ತದೆ.
ಈ ಅವಧಿಯಲ್ಲಿ ತರಬೇತಿ ನೀಡುವುದರಿಂದ ಮಕ್ಕಳು ಹಾಗೂ ಶಿಕ್ಷಕರ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಶಿಕ್ಷಣ ತಜ್ಞರು ಮತ್ತು ಮನೋ ವಿಜ್ಞಾನಿಗಳ ಜತೆ ಚರ್ಚಿಸದೆ ಯೋಜನೆ ಜಾರಿಗೊಳಿಸಲಾಗಿದೆ ಎಂದು ಆರೋಪಿಸಿದೆ.
ಪ್ರತಿ ತಾಲೂಕಿನ ವಿವಿಧೆಡೆ ‘ವಿಶ್ವಾಸ ಕಿರಣ’ ಕಲಿಕಾ ಕೇಂದ್ರ ಆರಂಭಿಸಿರುವುದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಬಸ್ ಪಾಸ್ ಮನೆಯಿಂದ ಶಾಲಾ ಸ್ಥಳಗಳಿಗೆ ಮಾತ್ರ ಇರಲಿದ್ದು, ಕಲಿಕಾ ಕೇಂದ್ರಕ್ಕೆ ಪ್ರಯಾಣಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಪ್ರಯಾಣಕ್ಕಾಗಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದೆ.
(ಸಾಂದರ್ಭಿಕ ಚಿತ್ರ)
