ಪಂಜಾಬ್ :  ಶಾಲೆಯಲ್ಲಿ ಸ್ಯಾನಿಟರಿ ಪ್ಯಾಡ್ ಧರಿಸಿದ ಹುಡುಗಿಯನ್ನು ಪತ್ತೆಹಚ್ಚಲು ಶಿಕ್ಷಕನೋರ್ವ ವಿದ್ಯಾರ್ಥಿನಿಯರೆಲ್ಲರ ಬಟ್ಟೆ ಬಿಚ್ಚಿಸಿದ ಪ್ರಕರಣ ಪಂಜಾಬಿನ ಫಾಜಿಲ್ಕಾ ಜಿಲ್ಲೆಯಲ್ಲಿ ನಡೆದಿದೆ. 

ಶಾಲೆ ಶೌಚಾಲಯದಲ್ಲಿ ಪ್ಯಾಡ್ ಹಾಕಿದ್ದರಿಂದ, ಶಿಕ್ಷಕ ವಿದ್ಯಾರ್ಥಿನಿ ಪತ್ತೆಗಾಗಿ ಈ ರೀತಿ ಮಾಡಿದ್ದಾರೆ. ಈ ಬಗ್ಗೆ ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ತಿಳಿಸಿದ್ದು, ಶಿಕ್ಷಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸದ್ಯ ಈ ವಿಚಾರ ಸಂಬಂಧ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ತನಿಖೆಗೆ ಆದೇಶಿಸಿದ್ದಾರೆ.