ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ರವ ಪುತ್ರಿ ಸಾರಾ ತೆಂಡೂಲ್ಕರ್‌ ಹೆಸರಲ್ಲಿ ನಕಲಿ ಟ್ವಿಟರ್‌ ಖಾತೆ ನಿರ್ವಹಿಸುತ್ತಿದ್ದ ಸಾಫ್ಟ್ವೇರ್‌ ಇಂಜಿನಿಯರ್‌ನೊಬ್ಬ ಮುಂಬೈ ಸೈಬರ್‌ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಮುಂಬೈ: ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ರವ ಪುತ್ರಿ ಸಾರಾ ತೆಂಡೂಲ್ಕರ್‌ ಹೆಸರಲ್ಲಿ ನಕಲಿ ಟ್ವಿಟರ್‌ ಖಾತೆ ನಿರ್ವಹಿಸುತ್ತಿದ್ದ ಸಾಫ್ಟ್ವೇರ್‌ ಇಂಜಿನಿಯರ್‌ನೊಬ್ಬ ಮುಂಬೈ ಸೈಬರ್‌ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬಂಧಿತ ನಿತಿನ್‌ ಶಿಸೋಡೆ(39) ಸಚಿನ್‌ ಪುತ್ರಿಯ ಹೆಸರಿನ ನಕಲಿ ಟ್ವಿಟರ್‌ ಖಾತೆ ಮೂಲಕ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ವಿರುದ್ಧದ ಅಂಶಗಳನ್ನು ಪೋಸ್ಟ್‌ ಮಾಡುತ್ತಿದ್ದ. ಹಾಗಾಗಿ, ಆರೋಪಿಯ ಲ್ಯಾಪ್‌ಟಾಪ್‌, ಎರಡು ಮೊಬೈಲ್‌ ಫೋನ್‌ಗಳು ಮತ್ತು ರೂಟರ್ಸ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ವಿಚಾರಣೆ ವೇಳೆ ಅಂಧೇರಿಯ ನಿವಾಸಿಯೋರ್ವ ಸಹ ಬಾಲಿವುಡ್‌ನಲ್ಲಿರುವ ಕೆಲ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ಟ್ವಿಟರ್‌ ಖಾತೆ ತೆರೆದಿರುವುದು ಬೆಳಕಿಗೆ ಬಂದಿದೆ.