ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯುತ್‌ ಶಾಕ್‌ ನೀಡಿ ಪತ್ನಿಯನ್ನು ಸಾಫ್ಟ್‌ವೇರ್‌ ಉದ್ಯೋಗಿಯೊಬ್ಬ ಕೊಲ್ಲಲು ಯತ್ನಿಸಿದ ಹೇಯ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ವಿಜಯವಾಡ: ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯುತ್‌ ಶಾಕ್‌ ನೀಡಿ ಪತ್ನಿಯನ್ನು ಸಾಫ್ಟ್‌ವೇರ್‌ ಉದ್ಯೋಗಿಯೊಬ್ಬ ಕೊಲ್ಲಲು ಯತ್ನಿಸಿದ ಹೇಯ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪತ್ನಿ ಹತ್ಯೆಗೆ ಸಂಚು ರೂಪಿಸಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತನನ್ನು ಕೃಷ್ಣಾ ಜಿಲ್ಲೆಯ ಎಸ್‌.ರಾಜರತ್ನಂ ಎಂದು ಗುರುತಿಸಲಾಗಿದೆ. ದಂಪತಿಗೆ ಈಗಾಗಲೇ ಗಂಡು ಮಗುವಿದ್ದು, ಜ.28ರಂದು ಪತ್ನಿ ಹೆಣ್ಣು ಮಗುವಿಗೆ ಜನ್ಮವಿತ್ತಿದ್ದರು. ಇದಾದ ಪತಿ ಹಲ್ಲೆ ನಡೆಸಿದ್ದಾನೆ ಎಂದು ಪತ್ನಿ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.