ಮೋದಿ ಸರ್ಕಾರಕ್ಕೆ ಬಿಗ್ ಶಾಕ್ : ಇಬ್ಬರು ಸಚಿವರ ರಾಜೀನಾಮೆ

Telangana CM Gets Huge Shock from Union Government
Highlights

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಬೇಡಿಕೆ ಸಂಬಂಧ ಕೇಂದ್ರ ಸರ್ಕಾರ ಮತ್ತು ತೆಲುಗು ದೇಶಂ ಪಕ್ಷದ ನಡುವೆ ನಡೆಯುತ್ತಿದ್ದ ಶೀತಲ ಸಮರ ಬುಧವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೇಂದ್ರ ಸಚಿವ ಸಂಪುಟದಿಂದ ಹೊರಬರಲು ಟಿಡಿಪಿ ನಿರ್ಧರಿಸಿದೆ.

ಅಮರಾವತಿ: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಬೇಡಿಕೆ ಸಂಬಂಧ ಕೇಂದ್ರ ಸರ್ಕಾರ ಮತ್ತು ತೆಲುಗು ದೇಶಂ ಪಕ್ಷದ ನಡುವೆ ನಡೆಯುತ್ತಿದ್ದ ಶೀತಲ ಸಮರ ಬುಧವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೇಂದ್ರ ಸಚಿವ ಸಂಪುಟದಿಂದ ಹೊರಬರಲು ಟಿಡಿಪಿ ನಿರ್ಧರಿಸಿದೆ.

ಈ ಮೂಲಕ 2019 ರ ಲೋಕಸಭಾ ಚುನಾವಣೆ ಬಳಿಕ ಮತ್ತೆ ಅಧಿಕಾರಕ್ಕೆ ಏರುವ ಬೃಹತ್ ಕನಸು ಕಾಣುತ್ತಿದ್ದ ಬಿಜೆಪಿಗೆ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಬಹುದೊಡ್ಡ ಶಾಕ್ ನೀಡಿದ್ದಾರೆ. ಮತ್ತೊಂದು ಮಿತ್ರಪಕ್ಷ ಶಿವಸೇನೆ ಬಿಜೆಪಿ ಮೈತ್ರಿಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಟಿಡಿಪಿಯಿಂದ ಈ ಶಾಕಿಂಗ್ ಸುದ್ದಿ ಹೊರಬಿದ್ದಿದೆ.

ಟಿಡಿಪಿಯ ಈ ನಡೆ ಬೆನ್ನಲ್ಲೇ, ಆಂಧ್ರ ಸರ್ಕಾರದಲ್ಲಿ ಸಚಿವರಾಗಿದ್ದ ಬಿಜೆಪಿಯ ಇಬ್ಬರು ಸಚಿವರು ತಾವು ಕೂಡಾ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಗುಡ್‌ಬೈ: ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಕೇಂದ್ರ ಸರ್ಕಾರ ಈಶಾನ್ಯದ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಸಂಪುಟ ಸೇರಿದ ಉದ್ದೇಶವೇ ಈಡೇರಲಿಲ್ಲ ಎಂದಾದ ಮೇಲೆ ನಾವು ಅಲ್ಲಿರುವುದರಲ್ಲಿ ಅರ್ಥವಿಲ್ಲ.

ಹೀಗಾಗಿ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿರುವ ಗಜಪತಿ ರಾಜು ಮತ್ತು ವೈ.ಎಸ್. ಚೌಧರಿ ಗುರುವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದಕ್ಕೂ ಮುಂದಿನ ನಿರ್ಧಾರಗಳನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ ಮೂಲಕ ತಕ್ಷಣಕ್ಕೆ ಎನ್‌ಡಿಎ ಮೈತ್ರಿಕೂಟದಿಂದ ಹೊರಹೋಗುವ ಸಾಧ್ಯತೆ ಇಲ್ಲ ಎಂಬ ಸುಳಿವು ನೀಡಿದ್ದಾರೆ.

loader