Asianet Suvarna News Asianet Suvarna News

ರಾಷ್ಟ್ರ ರಾಜಕೀಯ ಪ್ರವೇಶಕ್ಕೆ KCR ಭರದ ಸಿದ್ಧತೆ

ತೆಲಂಗಾಣದಲ್ಲಿ ಎರಡನೇ ಸಾರಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಮುಖ್ಯಮಂತ್ರಿ ಕೆಸಿಆರ್ ರಾಷ್ಟ್ರ ರಾಜಕಾರಣಕ್ಕೆ ಧುಮುಕಲು ಸಕಲ ಸಿದ್ಧತೆ ನಡೆಸಿಕೊಂಡಿದ್ದಾರೆ. ರಾಜ್ಯದಲ್ಲಿ ಪಕ್ಷದ ಜವಾಬ್ದಾರಿ ಯಾರಿಗೆ ವಹಿಸುತ್ತಾರೆ ಗೊತ್ತಾ? ಓದಿ ಈ ಸುದ್ದಿ. 

Telangana CM KCR to enter national politics
Author
Bengaluru, First Published Dec 15, 2018, 7:46 AM IST

ಹೈದರಾಬಾದ್‌: ತೆಲಂಗಾಣ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌)ಯನ್ನು ಅಧಿಕಾರಕ್ಕೆ ತಂದಿರುವ ಆ ಪಕ್ಷದ ಪರಮೋಚ್ಚ ನಾಯಕ ಕೆ. ಚಂದ್ರಶೇಖರ ರಾವ್‌ ರಾಷ್ಟ್ರ ರಾಜಕಾರಣದಲ್ಲಿ ಹೆಚ್ಚು ಗಮನಹರಿಸಲು ಸಿದ್ಧತೆಯಲ್ಲಿ ತೊಡಗಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಮಟ್ಟದಲ್ಲಿ ಸಕ್ರಿಯ ಪಾತ್ರ ನಿರ್ವಹಿಸುವ ಸಲುವಾಗಿ ತಮ್ಮ ಪುತ್ರ, ಮಾಜಿ ಸಚಿವ ಕೆ.ಟಿ. ರಾಮರಾವ್‌ ಅವರಿಗೆ ಪಕ್ಷದ ಹೊಣೆಯನ್ನು ರಾವ್‌ ವಹಿಸಿದ್ದು, ಕಾರ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಿದ್ದಾರೆ.

‘ಕೆಸಿಆರ್‌ ಅವರು ರಾಷ್ಟ್ರ ರಾಜಕಾರಣದಲ್ಲಿ ಹೆಚ್ಚು ಗಮನಹರಿಸಬೇಕಿರುವುದರಿಂದ ಹಾಗೂ ರಾಜ್ಯದಲ್ಲಿ ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ನೋಡಿಕೊಳ್ಳಬೇಕಾಗಿರುವುದರಿಂದ ರಾಮರಾವ್‌ ಅವರನ್ನು ಕಾರ್ಯಾದ್ಯಕ್ಷ ಹುದ್ದೆಗೆ ನೇಮಕ ಮಾಡಲಾಗಿದೆ’ ಎಂದು ಪಕ್ಷದ ಅಧಿಕೃತ ಪ್ರಕಟಣೆ ತಿಳಿಸಿದೆ. ರಾಮರಾವ್‌ ಅವರು ಟಿಆರ್‌ಎಸ್‌ನ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಇನ್ನೈದು ವರ್ಷ ಗಡ್ಡ ಬೋಳಿಸೋಲ್ಲ

ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಪ್ರತಿಕ್ರಿಯೆ ನೀಡಿದ್ದ ಕೆಸಿಆರ್‌, ರಾಷ್ಟ್ರೀಯ ಪಕ್ಷಗಳನ್ನು ಎದುರಿಸಲು ಪ್ರಾದೇಶಿಕ ಪಕ್ಷಗಳನ್ನು ಒಳಗೊಂಡ ಕಾಂಗ್ರೆಸ್ಸೇತರ ಹಾಗೂ ಬಿಜೆಪಿಯೇತರ ಒಕ್ಕೂಟ ರಚಿಸಲಾಗುತ್ತದೆ. ಕಾಂಗ್ರೆಸ್‌ ಮುಕ್ತ ಭಾರತ, ಬಿಜೆಪಿ ಮುಕ್ತ ಭಾರತದ ಅಗತ್ಯವಿದೆ ಎಂದಿದ್ದರು.

Follow Us:
Download App:
  • android
  • ios