ಟಾಲಿವುಡ್ ನಟ ರವಿತೇಜಾ ಸಹೋದರ ಭರತ್ ರಾಜು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಹೈದ್ರಾಬಾದ್(ಜೂ.25): ಟಾಲಿವುಡ್ ನಟ ರವಿತೇಜಾ ಸಹೋದರ ಭರತ್ ರಾಜು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೈದ್ರಾಬಾದ್'​ನ ಕೊತ್ವಾಲ್‌ಗೂಡಾದ ಔಟರ್​ ರಿಂಗ್​ ರೋಡ್​ ಬಳಿ ಭೀಕರ ಅಪಘಾತ ಸಂಭವಿಸಿದ್ದು ಭರತ್ ಸ್ಥಳದಲ್ಲೇ ಅಸುನೀಗಿದ್ದಾರೆ. ಭರತ್ ಅತಿವೇಗವಾಗಿ ಕಾರು ಚಲಿಸುತ್ತಿದ್ದು, ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.

ಹಲವು ತೆಲುಗು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ ಭರತ್ ರಾಜು ವಿವಾದಗಳ ಮೂಲಕವೇ ಸುದ್ದಿಯಾಗಿದ್ದರು. ಮಾದಕ ವಸ್ತು ಪ್ರಕರಣವೊಂದರಲ್ಲಿ ಭರತ್ ರಾಜು ಹೆಸರು ಕೇಳಿಬಂದಿತ್ತು. ಹೀಗಾಗಿ ಕಳೆದ ಕೆಲ ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದರು.

ಭರತ್‌ರಾಜು ನಿಧನಕ್ಕೆ ತೆಲುಗು ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.